ಫೆ.1ಕ್ಕೆ ಕೇಂದ್ರ ಬಜೆಟ್..?

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜ.5- ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಸಿದ್ಧತೆ ಅಂತಿಮ ಹಂತದಲ್ಲಿದ್ದು , ಫೆ.1ರಂದು ಮಂಡನೆಯಾಗುವ ಸಾಧ್ಯತೆ ಇದೆ. ಜನವರಿ ಕೊನೆ ವಾರದಲ್ಲಿ ಸಂಸತ್ ಬಜೆಟ್ ಅಧಿವೇಶನ ಆರಂಭವಾಗುವ ಸಾಧ್ಯತೆ ಇದ್ದು, ಈ ಕುರಿತು ಸಚಿವಾಲಯದ ವಿವಿಧ ಇಲಾಖೆಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ.1ರಂದು ಬಜೆಟ್ ಮಂಡಿಸುವ ಸಾಧ್ಯತೆ ಇದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಚಿವ ಸಂಪುಟದ ಸಂಸದೀಯ ಸಮಿತಿಯು ಬಜೆಟ್ ಅಧಿವೇಶನದ ದಿನಾಂಕ ನಿಗದಿಪಡಿಸಿದ ಬಳಿಕ ಕೇಂದ್ರ ಸರ್ಕಾರ ಅಧಿಕೃತವಾಗಿ ಪ್ರಕಟಿಸಲಿದೆ.

ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ವೇಳೆ ಆರ್ಥಿಕ ಸಮೀಕ್ಷೆಯನ್ನು ಮಂಡಿಸುವ ಸಂಭವ ಇದೆ.
ಬಜೆಟ್ ಅಧಿವೇಶನ ಏಪ್ರಿಲ್‍ವರೆಗೆ ಮುಂದುವರೆಯಲಿದೆ ಎಂದು ಮೂಲಗಳು ತಿಳಿಸಿವೆ.

Facebook Comments