ಜ.31ರಿಂದ ಏ.3ರವರೆಗೆ ಸಂಸತ್ ಬಜೆಟ್ ಅಧಿವೇಶನ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜ.16- ಸಂಸತ್ತಿನ ಬಜೆಟ್ ಅಧಿವೇಶನ ಜ.31ರಿಂದ ಏ.3ರವರೆಗೆ ನಡೆಯಲಿದ್ದು ,ಫೆ.1ರಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮುಂಗಡಪತ್ರ ಮಂಡನೆಯಾಗಲಿದೆ. ಜ.31ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉಭಯ ಸದನಗಳನ್ನು ಉದ್ದೇಶಿಸಿ ಜಂಟಿ ಭಾಷಣ ಮಾಡಲಿದ್ದಾರೆ.

2020ರ ಜ.31ರಂದು ಸಭೆ ಸೇರುವಂತೆ ಲೋಕಸಭೆ ಮತ್ತು ರಾಜ್ಯಸಭೆಗೆ ಸೂಚಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಸಂಸತ್ತಿನ ಕಲಾಪಗಳಿಗನುಗುಣವಾಗಿ ಏ.3 ರವರೆಗೆ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ. ಇದು ಈ ವರ್ಷದ ಮೊದಲ ಅಧಿವೇಶನವಾಗಿರಲಿದೆ.

ಫೆ.1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಸಕ್ತ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಇದು ಎರಡನೆ ಬಾರಿ ಅಧಿಕಾರಕ್ಕೆ ಬಂದಿರುವ ಮೋದಿ ಸರ್ಕಾರದ ಪ್ರಥಮ ಪರಿಪೂರ್ಣ ಬಜೆಟ್ ಆಗಲಿದೆ.

ಆರ್ಥಿಕ ಕುಸಿತ , ಹಣದುಬ್ಬ,ಅಗತ್ಯವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ, ಉದ್ಯಮಗಳ ಸಂಕಷ್ಟ ಮೊದಲಾದ ಪ್ರಮುಖ ಸಮಸ್ಯೆಗಳ ನಿಯಂತ್ರಣಕ್ಕೆ ಬಜೆಟ್‍ನಲ್ಲಿ ಆದ್ಯತೆ ನೀಡುವುದು ಬಹುತೇಕ ಖಚಿತವಾಗಿದೆ.

Facebook Comments