ಪಿಎಂ ಮೋದಿ ಮನಗೆದ್ದ ಕಾಮೇಗೌಡರಿಗೆ ಸಿಎಂ ಕಡೆಯಿಂದ ಸಿಕ್ತು ಬಂಪರ್ ಗಿಫ್ಟ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ಜು.2-ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕೆರೆಗಳ ಮನುಷ್ಯ ಕಾಮೇಗೌಡರಿಗೆ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ಸುಗಳಲ್ಲಿ ಜೀವಿತಾವಧಿಯವರೆಗೂ‌ ಉಚಿತವಾಗಿ ಪ್ರಯಾಣಿಸಲು ಬಸ್ ಪಾಸ್ ನೀಡಿದೆ.

‘ಆಧುನಿಕ ಭಗೀರಥ’, ‘ಕೆರೆಗಳ ಮನುಷ್ಯ’ ಎಂದೇ ಪ್ರಖ್ಯಾತಿಯನ್ನು ಪಡೆದಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡರ ಅನನ್ಯ ಪರಿಸರ ಕಾಳಜಿಯನ್ನು ಮತ್ತು ಸಾಧನೆಯನ್ನು ಪ್ರಧಾನ ಮಂತ್ರಿಗಳು ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಉಲ್ಲೇಖಿಸಿರುತ್ತಾರೆ.

ಮುಖ್ಯಮಂತ್ರಿಗಳು ಸಹ ಕಾಮೇಗೌಡರವರ ಅಪರಿಮಿತ ಸಾಧನೆಗಾಗಿ ‘ಉಚಿತ ಬಸ್ ಪಾಸ್‌’ ನೀಡಲು ಆದೇಶಿಸಿರುತ್ತಾರೆ. ಕಾಮೇಗೌಡರ ಕೊಡುಗೆ ಅಪಾರ, ಅದ್ಭುತ ಹಾಗೂ ಅನುಕರಣೀಯವಾಗಿದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಎಲ್ಲಾ ಮಾದರಿಯ ಬಸ್ಸುಗಳಲ್ಲಿ ಅವರ ಜೀವಿತಾವಧಿಯವರೆಗೆ ಉಚಿತವಾಗಿ ಪ್ರಯಾಣಿಸಲು ಬಸ್ ಪಾಸನ್ನು ನೀಡಲು ಅನುಮತಿಸಲಾಗಿದೆ ಎಂದು ಕೆ ಎಸ್ ಆರ್ ಟಿ‌‌‌ ಸಿಯ ವ್ಯವಸ್ಥಾಪಕ‌ ನಿರ್ದೇಶಕ ಶಿವಯೋಗಿ ಸಿ.ಕಳಸದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook Comments

Sri Raghav

Admin