ಕಣಿವೆಗೆ ಉರುಳಿದ ಬಸ್ : 6ಮಂದಿ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ, ನ.4 (ಪಿಟಿಐ)-ಖಾಸಗಿ ಬಸ್ಸೊಂದು ಕಣಿವೆಗೆ ಉರುಳಿ ಆರು ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಇಂದು ಮುಂಜನೆ ಮಹಾರಾಷ್ಟ್ರದ ಮುಂಬೈ-ಪುಣೆ ಹೆದ್ದಾರಿಯಲ್ಲಿ ಸಂಭವಿಸಿದೆ.  48 ಪ್ರಯಾಣಿಕರಿದ್ದ ಈ ಲಕ್ಸುರಿ ಬಸ್ ಸತಾರಾ ಜಿಲ್ಲೆಯ ಕರಾಡ್‌ನಿಂದ ಮುಂಬೈಗೆ ತೆರಳುತ್ತಿತ್ತು.

ಅಮೃತಾಂಜನ್ ಸುರಂಗ ಸೇತುವೆ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸುಮಾರು 40 ಅಡಿ ಆಳದ ಹಳ್ಳಕ್ಕೆ ಬಿತ್ತು ಎಂದು ಖೋಪೊಲಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಧಾನಾಜಿ ಕ್ಷೀರಸಾಗರ್ ತಿಳಿಸಿದ್ದಾರೆ.  ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.

ಅಪಘಾತ : 25 ಮಂದಿಗೆ ಗಾಯ ಅತ್ತ ಉತ್ತರ ಪ್ರದೇಶದ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ 25 ಮಂದಿ ಗಾಯಗೊಂಡಿರುವ ಘಟನೆ ಇಂದು ಮುಂಜನೆ ಸಂಭವಿಸಿದೆ.

ಆಗ್ರಾದಿಂದ ಲಕ್ನೋಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಮಾತಾಸೈನ ಎಂಬಲ್ಲಿ ಟ್ರಕ್‌ಗೆ ಹಿಂದಿನಿಂದ ಅಪ್ಪಳಿಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Facebook Comments