ವಿಜಯಪುರ ಜಿಲ್ಲೆಯ ಸಿಂದಗಿಯ NH 218ರಲ್ಲಿ ಭೀಕರ ರಸ್ತೆ ಅಪಘಾತ..!

ಈ ಸುದ್ದಿಯನ್ನು ಶೇರ್ ಮಾಡಿ

ವಿಜಯಪುರ : ಜಿಲ್ಲೆಯ ಸಿಂದಗಿ ಪಟ್ಟಣದ ಹೊರ ಭಾಗದ ಎನ್‌ಎಚ್ 218 ರಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಟ್ಯಾಂಕರ್ ಹಾಗೂ ಸರ್ಕಾರಿ ಬಸ್ ಮಧ್ಯೆ ಉಂಟಾದ ಅಪಘಾತದಲ್ಲಿ ಪ್ರಯಾಣಿಕರು ಸೇರಿ, 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.

ಬಸ್‌ನಲ್ಲಿ ವಿವಿಧ ಶಾಲಾ ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳೇ ಹೆಚ್ಚು ಇದ್ದರು. ಗಾಯಳು ವಿದ್ಯಾರ್ಥಿಗಳನ್ನು ಸ್ಥಳೀಯರ ನೆರವಿನಿಂದಾಗಿ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ಚಿಕೆತ್ಸೆಗಾಗಿ ದಾಖಲು ಮಾಡಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ತಿಳಿದ ಕೂಡಲೆ ಸ್ಥಳಕ್ಕೆ ಬಂದ ಸಿಂದಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲಿಸುತ್ತಿದ್ದಾರೆ.

Facebook Comments

Sri Raghav

Admin