ಕೆಎಸ್ಆರ್‌ಟಿಸಿ-ಖಾಸಗಿ ಬಸ್ ನಡುವೆ ಡಿಕ್ಕಿ, ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು,ಫೆ.14- ಕೆಎಸ್ಆರ್‌ಟಿಸಿ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊರಟಗೆರೆ ಮಧುಗಿರಿ ರಸ್ತೆಯಲ್ಲಿ ಹಲವು ದಿನಗಳಿಂದ ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ಈ ಮಾರ್ಗ ಬಂದ್ ಮಾಡಿ ಸರ್ಕಾರಿ ಜೂನಿಯರ್ ಕಾಲೇಜು ಪಕ್ಕದಲ್ಲಿರುವ ವಡ್ಡಗೆರೆ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿವೆ.

ಇಂದು ಬೆಳಗ್ಗೆ 8.30ರ ಸುಮಾರಿನಲ್ಲಿ ಈ ಮಾರ್ಗವಾಗಿ ಬಂದ ಖಾಸಗಿ ಬಸ್ ಹಾಗೂ ಕೆಎಸ್‍ಆರ್‍ಟಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದರಿಂದ ಎರಡು ಬಸ್‍ಗಳ ಚಾಲಕರು ಸೇರಿದಂತೆ ಹತ್ತು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.  ಸುದ್ದಿ ತಿಳಿದು ಕೊರಟಗೆರೆ ಠಾಣೆಯ ಸಬ್‍ಇನ್‍ಸ್ಪೆಕ್ಟರ್ ಮಂಜುನಾಥ್, ವೃತ್ತ ನಿರೀಕ್ಷಕರಾದ ನದಾಫ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments