ಜಟ್ಟಿ ಅಗ್ರಹಾರದ ಬಳಿ ಬಸ್ ಅಪಘಾತ : ಗಾಯಾಳುಗಳ ಆರೋಗ್ಯ ವಿಚಾರಿಸಿದ ಜಿಲ್ಲಾ ಉಸ್ತುವಾರಿ ಸಚಿವರು

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಅ.31- ಜಿಲ್ಲೆಯ ಕೊರಟಗೆರೆ ತಾಲೂಕಿನ ಜಟ್ಟಿ ಅಗ್ರಹಾರದ ಬಳಿ ಸಂಭವಿಸಿದ ಬಸ್ ದುರಂತದಲ್ಲಿ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೊರಟಗೆರೆ ತಾಲ್ಲೂಕಿನ ಜಟ್ಟಿ ಅಗ್ರಹಾರದ ಬಳಿ ಬುಧವಾರ ಬೆಳಿಗ್ಗೆ ಸಂಭವಿಸಿದ ಬಸ್ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ್ದು, ನಂತರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದೇನೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು ನೀಡಿದ ಮಾಹಿತಿಯಂತೆ ಎದುರಿಗೆ ಬಂದ ಆಟೋರಿಕ್ಷಾವನ್ನು ತಪ್ಪಿಸಲು ಹೋಗಿ ಖಾಸಗಿ ಬಸ್ ತಲೆಕೆಳಗಾಗಿ ಬಿದ್ದದ್ದರಿಂದ ಈ ಅಪಘಾತ ಸಂಭವಿಸಿದೆ ಎಂದರು.

ವಾಹನಗಳು ವೇಗಮಿತಿ ಇಲ್ಲದೇ, ಖಾಸಗಿ ಬಸ್‍ಗಳು ಓಡಾಡುವ ಸಮಯದ ಅಂತರ ಕಡಿಮೆ ಇರುವುದರಿಂದ ಈ ರೀತಿಯ ಅಪಘಾತಗಳು ಸಂಭವಿಸುತ್ತಿವೆ. ಅಲ್ಲದೇ ಅಪಘಾತಕ್ಕೀಡಾದ ಖಾಸಗಿ ಬಸ್‍ಗೆ ಸೂಕ್ತ ದಾಖಲೆಗಳು ಸರಿಯಾಗಿರುವುದರಿಂದ ಇನ್ಸುರೆನ್ಸ್ ಕ್ಲೇಮ್ ಮಾಡಿಕೊಡಲು ಅನುಕೂಲವಾಗುತ್ತದೆ. ಅಲ್ಲದೇ ಮುಖ್ಯಮಂತ್ರಿಗಳ ಬಳಿ ಮಾತನಾಡಿ ಪರಿಹಾರ ಕೊಡಿಸಲು ಪ್ರಯತ್ನ ಮಾಡುತ್ತೇನೆ ಎಂದು ಅವರು ತಿಳಿಸಿದರು.

Facebook Comments