ಬಸ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಹೊತ್ತಿಹುರಿದ ಖಾಸಗಿ ಬಸ್

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ರದುರ್ಗ, ಅ.27- ಲಾರಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ಹೊತ್ತಿ ಉರಿದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಿರಿಯೂರು ತಾಲ್ಲೂಕಿನ ಕಪಿಲೆಹಟ್ಟಿ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ. ವೆಂಕಟೇಶ್ (40) ಮೃತಪಟ್ಟ ಲಾರಿ ಚಾಲಕ.

ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಚಳ್ಳಕೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕ್ಯಾಂಟರ್ ಲಾರಿ ಕಪಿಲೆಹಟ್ಟಿ ಬಳಿ ಮುಖಾಮುಖಿ ಡಿಕ್ಕಿಯಾಗಿದೆ.
ಡಿಕ್ಕಿಯಾದ ರಭಸಕ್ಕೆ ಬಸ್‍ಗೆ ಬೆಂಕಿ ಹೊತ್ತಿಕೊಂಡಿದೆ. ಎಚ್ಚೆತ್ತ ಬಸ್ ಚಾಲಕ ಪ್ರಯಾಣಿಕರನ್ನು ಬಸ್‍ನಿಂದ ಕೆಳಗಿಳಿಸಿದ ಪರಿಣಾಮ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದಂತಾಗಿದೆ. ಆದರೆ, ಲಾರಿ ಚಾಲಕನಿಗೆ ಗಂಭೀರ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಸ್‍ನಲ್ಲಿ 15 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಐಮಂಗಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook Comments