ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ: ಇಬ್ಬರು ಕೂಲಿಕಾರ್ಮಿಕರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಬಳ್ಳಾರಿ,ಏ.25- ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸಪೇಟೆ ತಾಲೂಕು ಹಾರುವನಳ್ಳಿ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.ಯರ್ರಿಸ್ವಾಮಿ(35) ಹಾಗೂ ರೇಣುಕಮ್ಮ(38) ಮೃತ ದುರ್ದೈವಿಗಳು.

ನರೇಗಾ ಕೆಲಸಕ್ಕೆ ಗೊಲ್ಲರಹಳ್ಳಿ, ಬಸವನದುರ್ಗ ಕೆರೆಗೆ ಚಿಲಕರಹಟ್ಟಿ ಗ್ರಾಮದಿಂದ ಟ್ರ್ಯಾಕ್ಟರ್‍ನಲ್ಲಿ ಕೂಲಿ ಕಾರ್ಮಿಕರನ್ನು ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ಹಾರುವನಳ್ಳಿ ಬಳಿ ಎದುರಿನಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಗಾಯಾಳುಗಳನ್ನು ಹೊಸಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹಲವರ ಸ್ಥಿತಿ ಗಂಭೀರವಾಗಿದೆ. ಈ ಬಗ್ಗೆ ಮರಿಯಮ್ಮನಹಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ