ಬಸ್ ಪಲ್ಟಿ : 3 ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗ,ಏ.18- ಬಸ್ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸಾಗರ ಸಮೀಪದ ಉಳ್ಳೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಕೀರ್ತನಾ, ಸುಜಾತ, ಮಹಮ್ಮದ್ ಮೃತ ದುರ್ದೈವಿಗಳು.

ಸಾಗರದಿಂದ ಬೆಂಗಳೂರಿಗೆ ಹೊರಟಿದ್ದ ಸೀಬರ್ಡ್ ಬಸ್ ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ. ಬಸ್ ನಲ್ಲಿ ಸಿಲುಕಿಕೊಂಡಿದ್ದವರನ್ನು ಹೊರ ತೆಗೆಯಲಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ