ಬಸ್-ಟ್ರಕ್ ನಡುವೆ ಭೀಕರ ಅಪಘಾತ, 7 ಮಂದಿ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಲಖನೌ, ಏ.21- ಉತ್ತರ ಪ್ರದೇಶದ ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇ ಮೃತ್ಯಕೂಪವಾಗಿ ಪರಿಣಮಿಸಿದ್ದು, ಭೀಕರ ಅಪಘಾತಗಳು ಮತ್ತು ಸಾವು-ನೋವು ಮರುಕಳಿಸುತ್ತಲೇ ಇವೆ.

ಹೆದ್ದಾರಿಯಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ 34 ಮಂದಿ ಗಾಯಗೊಂಡಿದ್ದಾರೆ. ಗಾಯಾಗಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಂಭವವಿದೆ.

ಉತ್ತರ ಪ್ರದೇಶದ ಮೈನ್ ಪುರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಬಸ್ ಸರಕು ಸಾಗಣೆ ಟ್ರಕ್‍ಗೆ ಢಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ 7 ಮಂದಿ ಪ್ರಯಾಣಿಕರು ಸಾವನ್ನಪ್ಪಿ, 34 ಮಂದಿ ಗಾಯಗೊಂಡಿದ್ದಾರೆ. ಬಸ್‍ನಲ್ಲಿ 45ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಸಮೀಪದ ಆಸ್ರತ್ರೆಗೆ ದಾಖಲು ಮಾಡಲಾಗಿದೆ. ಈ ಹೆದ್ದಾರಿಯಲ್ಲಿ ಪದೇ ಪದೇ ಭೀಕರ ಅಪಘಾತಗಳು ಸಂಭವಿಸುತ್ತಿದ್ದು, ವಾಹನಗಳ ಅತೀವೇಗವೇ ಇಂತಹ ದುರಂತಕ್ಕೆ ಕಾರಣವಾಗಿದೆ.

Facebook Comments

Sri Raghav

Admin