ಬೃಹತ್ ಮರಕ್ಕೆ ಗುದ್ದಿದ ಕೆಎಸ್‌ಆರ್‌ಟಿಸಿ ಬಸ್, ಚಾಲಕ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ತಿರುವನಂತಪುರಂ, ನ. 30- ಇಂದು ಮುಂಜಾನೆ ಕೊಚ್ಚಿಗೆ ತೆರಳುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್‍ವೊಂದು ಬೃಹತ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ಚಾಲಕನನ್ನು ತಿರುವನಂತಪುರಂನ ವಾಸಿ ಅರುಣ್‍ಕುಮಾರ್ ಎಂದು ಗುರುತಿಸಲಾಗಿದೆ.

ಇಂದು ಮುಂಜಾನೆ ಕೊಚ್ಚಿ ಹಾಗೂ ಕೋಯಿಕ್ಕೋಡ್ ನಡುವೆ ಸಂಚರಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಚಕ್ಕರಪರಂಬು ಬಳಿ ಬೃಹತ್ ಮರಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಅಪಘಾತವಾಗುವುದಕ್ಕಿಂತ ಮುಂಚೆ ಪ್ರಯಾಣಿಕರಿಗೆ ಪ್ರಯಾಣದ ಮಧ್ಯೆ ಬ್ರೇಕ್ ನೀಡಲಾಗಿತ್ತು. ವಿರಾಮದ ನಂತರ ಚಾಲಕ ಅರುಣ್‍ಕುಮಾರ್ ಬಸ್ ಸ್ಟಾರ್ಟ್ ಮಾಡುತ್ತಿದ್ದಂತೆ ನಿಯಂತ್ರಣ ತಪ್ಪಿ ಬೃಹತ್ ಮರಕ್ಕೆ ಗುದ್ದಿದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟು, 25ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮರಕ್ಕೆ ಗುದ್ದಿದ ರಭಸದಿಂದಾಗಿ ಬಸ್‍ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.  ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಪೆÇಲೀಸರು ಸ್ಥಳಕ್ಕೆ ಆಗಮಿಸಿ ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ, ಚಾಲಕ ಅರುಣ್‍ಕುಮಾರ್‍ರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ.

Facebook Comments