ಬಸ್-ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ರಾಯ್ಪುರ, ಸೆ.5- ಛತ್ತೀಸ್‍ಗಢದ ರಾಜಧಾನಿ ರಾಯ್ಪುರದಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟು, ಇತರ ಏಳು ಜನರು ತೀವ್ರ ಗಾಯಗೊಂಡಿದ್ದಾರೆ.

ಕಾರ್ಮಿಕರಿದ್ದ ಬಸ್, ಎದುರು ದಿಕ್ಕಿನಿಂದ ಬರುತ್ತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ರಾಯ್ಪುರ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಯಾದವ್ ತಿಳಿಸಿದ್ದಾರೆ.  ಒಡಿಶಾದ ಗಂಜಾನಿಂದ ಗುಜರಾತ್‍ನ ಸೂರತ್‍ಗೆ ತೆರಳುತ್ತಿದ್ದ ಬಸ್ ರಾಯ್ಪುರದಲ್ಲಿ ಇಂದು ನಸುಕಿನ ವೇಳೆ ಟ್ರಕ್ ಅಪ್ಪಳಿಸಿತು. ಈ ದುರ್ಘಟನೆಯಲ್ಲಿ ಏಳು ಮಂದಿ ಸಾವಿಗೀಡಾದರು.

ತೀವ್ರ ಗಾಯಗೊಂಡ ಇತರ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಶೋಚನೀಯವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಎಸ್ಪಿ ಯಾದವ್ ತಿಳಿಸಿದ್ದಾರೆ.

Facebook Comments