ಸಾರ್ವಜನಿಕರ ಹಿತದೃಷ್ಟಿಯಿಂದ ದೂರು ನೀಡಲಾಗಿದೆ : ವಿಜಯೇಂದ್ರ ಸ್ಪಷ್ಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.2- ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ದೂರು ನೀಡಲಾಗಿದೆ. ದೂರಿನ ಮೇರೆಗೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನನ್ನನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕು ಎಂದು ವಿನಂತಿಸಿಕೊಂಡಿದ್ದಾರೆ.

ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ ಎಂದು ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Facebook Comments