ರಾಜರಾಜೇಶ್ವರಿನಗರದಲ್ಲಿ ಶಾಂತಿಯುತ ಮತದಾನಕ್ಕೆ ಬಂದೋಬಸ್ತ್: ಕಮಲ್‍ಪಂಥ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.31- ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮುಕ್ತ ಹಾಗೂ ಶಾಂತಿಯುತ ಮತದಾನ ನಡೆಯಲು ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್‍ಪಂಥ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಿರಂಗ ಪ್ರಚಾರದ ವೇಳೆ ಕೆಲವು ಸಣ್ಣಪುಟ್ಟ ಘಟನೆಗಳು ನಡೆದಿದ್ದು, ಸ್ಥಳೀಯ ಪೊಲೀಸರು ಅವುಗಳನ್ನು ಬಗೆಹರಿಸಿದ್ದಾರೆ ಎಂದರು.

ಪ್ರಚಾರ ಸಂದರ್ಭದಲ್ಲಿ ಕೊರೊನಾ ಮಾರ್ಗಸೂಚಿ ನಿಯಮಗಳನ್ನು ಗಾಳಿಗೆ ತೂರಿದ ಮೇರೆಗೆ ಈವರೆಗೆ ಐದು ಪ್ರಕರಣಗಳು ದಾಖಲಾಗಿವೆ ಎಂದು ಅವರು ಹೇಳಿದರು.
ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆ ಸರಿಯಾದ ರೀತಿಯಲ್ಲಿ ನಡೆಯುತ್ತಿದೆ.

ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವವರ ಪತ್ತೆಗಾಗಿ ಹೊರರಾಜ್ಯದಲ್ಲಿ ಹುಡುಕಾಟ ನಡೆಸಲಾಗಿದೆ ಎಂದು ತಿಳಿಸಿದರು. ಪರಾರಿಯಾಗಿರುವ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅವರು ತಿಳಿಸಿದರು.

#ಡಿಜೆ ಹಳ್ಳಿ- ಕೆಜೆ ಹಳ್ಳಿ ಗಲಭೆಗೆ
ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್‍ರಾಜ್ ವಿರುದ್ಧ ಈಗಾಗಲೇ ಚಾರ್ಜ್‍ಶೀಟ್ ಸಲ್ಲಿಸಿದ್ದೇವೆ. ನಾಪತ್ತೆಯಾಗಿರುವ ಅವರ ಪತ್ತೆಗಾಗಿ ತಂಡ ರಚಿಸಲಾಗಿದೆ ಎಂದು ಕಮಲ್‍ಪಂಥ್ ತಿಳಿಸಿದರು.

Facebook Comments