ಹೆಬ್ಬಾಳ ಶಾಸಕ ಬೈರತಿ ಸುರೇಶ್ ಮೇಲೆ ಹಲ್ಲೆಗೆ ಯತ್ನ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.18-ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಹತ್ಯೆಗೆ ಯುವಕನೊಬ್ಬ ಯತ್ನಿಸಿದ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸಂಜೆ ಸುಮಾರು 4.30ರ ಸಮಯದಲ್ಲಿ ಸುರೇಶ್ ಅವರು, ಬೈರತಿಯ ನಿವಾಸದಿಂದ ಹೊರಗೆ ಬರುತ್ತಿದ್ದಾಗ ಯುವಕನೊಬ್ಬ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಈ ಘಟನೆ ನಡೆದಿದ್ದು, ಅವರಿಗೆ ಯಾವುದೇ ಗಾಯಗಳಾಗಿಲ್ಲ.

ತಮಗೆ ಪರಿಚಯವಿರುವ ಹುಡುಗನೇ ಈ ಕೃತ್ಯಕ್ಕೆ ಮುಂದಾಗಿರುವುದು ಆಶ್ಚರ್ಯ ತಂದಿದೆ. ನಮ್ಮ ಗನ್‍ಮ್ಯಾನ್‍ಗಳ ಸಹಾಯದಿಂದ ಅಪಾಯದಿಂದ ಪಾರಾಗಿದ್ದೇನೆಂದು ಸುರೇಶ್ ತಿಳಿಸಿದ್ದಾರೆ.

ಕಳೆದ ಎರಡು-ಮೂರು ದಿನಗಳಿಂದ ನಮಗೆ ಪರಿಚಯವಿರುವ ಶಿವು ಎಂಬ ಹುಡುಗ ಮನೆ ಸುತ್ತಮುತ್ತ ಅಡ್ಡಾಡುತ್ತಿದ್ದನೆಂದು ನಮ್ಮ ಸೆಕ್ಯೂರಿಟಿ ತಿಳಿಸಿದ್ದಾರೆ. ಇಂದು ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ. ಯಾವ ಕಾರಣಕ್ಕಾಗಿ ಈ ರೀತಿ ಮಾಡಿದ್ದಾನೆಂಬುದು ಗೊತ್ತಿಲ್ಲ.

ನನಗೆ ಯಾರು ಅಂತಹ ಶತ್ರುಗಳಿಲ್ಲ, ಪೊಲೀಸರ ತನಿಖೆಯಿಂದ ಸತ್ಯಾಂಶ ಹೊರಬರಬೇಕಾಗಿದೆ ಎಂದರು. ಕೊತ್ತನೂರು ಠಾಣೆ ಪೊಲೀಸರು ಆರೋಪಿ ಶಿವುನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin