ಸಿಎಎ ಕಾಯ್ದೆ ವಿರೋಧಿಸಿ ಪ್ರತಿಭಟನೆ ವೇಳೆ ಘರ್ಷಣೆ, 180 ಜನರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಚೆನ್ನೈ, ಫೆ.15- ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸ್ ಮತ್ತು ಪ್ರತಿಭಟನಕಾರರ ನಡುವೆ ಘರ್ಷಣೆ ನಡೆಸಿದ್ದು 180ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಐದು ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆ ನಡೆಸುತ್ತಿದ್ದು, ಮಿಂಟ್ ಸೇತುವೆ ಪ್ರವೇಶದ್ವಾರವನ್ನು ಮುಚ್ಚಿದರು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಪ್ರತಿಭಟನಾಕಾರರನ್ನು ಚದುರಿಸಿದ್ದು, ಹಲವರನ್ನು ಬಂಧಿಸಿದ್ದಾರೆ. ಪ್ರತಿಭಟನಾಕಾರನ್ನು ಚದುರಿಸಲು ಈ ಪೊಲೀಸರು ಲಾಠಿ ಚಾರ್ಚ್ ಮಾಡಬೇಕಾಯಿತು. ಈ ವೇಳೆ ಹಲವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘರ್ಷಣೆ ವೇಳೆ ಕೆಲ ಪೊಲೀಸರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಬಂಧಿತರ ವಿರುದ್ಧ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Facebook Comments