ಪೌರತ್ವ ಮಸೂದೆ : ಗುವಾಹತಿಯಲ್ಲಿ ಕಫ್ರ್ಯೂ ಸಡಿಲಿಕೆ, ತೀವ್ರ ಕಟ್ಟೆಚ್ಚರ..!

ಈ ಸುದ್ದಿಯನ್ನು ಶೇರ್ ಮಾಡಿ

ಗುವಾಹತಿ, ಡಿ.14- ಪೌರತ್ವ ತಿದ್ದುಪಡಿ ಮಸೂದೆಯಿಂದಾಗಿ ಈಶಾನ್ಯ ಭಾರತದಲ್ಲಿ ಭುಗಿಲೆದ್ದ ಹಿಂಸಾಚಾರ ತಡೆಗೆ ವಿಧಿಸಲಾಗಿದ್ದ ಕಫ್ರ್ಯೂವನ್ನು ಗುವಾಹತಿಯಲ್ಲಿ ಇಂದು ಕೆಲ ಕಾಲ ಸಡಿಲಗೊಳಿಸಲಾಗಿದೆ.

ತೀವ್ರ ಹಿಂಸಾಚಾರಕ್ಕೆ ಕಾರಣವಾದ ಅಸ್ಸಾಂ ರಾಜಧಾನಿ ಗುವಾಹತಿ ಇಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಕಫ್ರ್ಯೂ ಸಡಿಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಉನ್ನತಾಧಿಕಾರಿ ಮಾಹಿತಿ ನೀಡಿದ್ದಾರೆ. ಅತ್ತ ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಪೂರ್ವೋತ್ತರದ ರಾಜ್ಯಗಳಲ್ಲಿ ಹಿಂಸಾಚಾರ ಮುಂದುವರೆದಿದೆ.

ಅಸ್ಸಾಂನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆ ಮತ್ತು ಉಪವಾಸ ಸತ್ಯಾಗ್ರಹ ಮುಂದುವರೆದಿದ್ದು , ಬೂದಿ ಮುಚ್ಚಿದ ಕೆಂಡದಂತಹ ವಾತಾವರಣವಿದೆ. ರಾಜ್ಯದ ಒಟ್ಟು ಹತ್ತು ಜಿಲ್ಲೆಗಳಲ್ಲಿ ಹಿಂಸಾಚಾರದ ಘಟನೆಗಳು ನಡೆದಿದ್ದು, ಕಫ್ರ್ಯೂ ಜಾರಿಗೊಳಿಸಲಾಗಿದೆ. ಗುವಾಹಾಟಿ ಮತ್ತು ದಿಬ್ರುಗಡ್ ಜಿಲ್ಲೆಗಳಲ್ಲಿ ಕಫ್ರ್ಯೂನಲ್ಲಿ ಸಡಿಲಿಕೆಗೆ ಅವಕಾಶ ನೀಡಲಾಗಿದೆ.

ಈ ಅವಧಿಯಲ್ಲಿ ಸಾರ್ವಜನಿಕರು ಅಗತ್ಯವಿರುವ ವಸ್ತುಗಳನ್ನು ಖರೀದಿಸಿದರು. ಅಸ್ಸಾಂನಲ್ಲಿ ನಡೆದ ಹಿಂಸಾಚಾರ ಮತ್ತು ಪೊಲೀಸ್ ಗೋಲಿಬಾರ್‍ನಲ್ಲಿ ನಾಲ್ವರು ಮೃತಪಟ್ಟು, ಅನೇಕರು ಗಾಯಗೊಂಡಿದ್ದಾರೆ.ಡಿ.22ರವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.  ಅಸ್ಸಾಂನ ಒಟ್ಟು 10 ಜಿಲ್ಲೆಗಳಲ್ಲಿ ಇಂಟರ್‍ನೆಟ್ ಸೇವೆಯನ್ನೂ ಕೂಡ ಸ್ಥಗಿತಗೊಳಿಸಲಾಗಿದೆ.

ಮೇಘಾಲಯದಲ್ಲಿಯೂ ಕೂಡ ಇಂಟರ್‍ನೆಟ್ ಬಳಕೆಯ ಮೇಲೆ ನಿಷೇಧ ಹೇರಲಾಗಿದೆ. ಶಿಲಾಂಗ್ ನ ಕೆಲ ಪ್ರಾಂತ್ಯಗಳಲ್ಲಿಯೂ ಕೂಡ ಕಫ್ರ್ಯೂ ಜಾರಿಗೊಳಿಸಲಾಗಿದೆ. ಪೌರತ್ವ ತಿದ್ದುಪಡಿ ಕಾನೂನನ್ನು ಹಿಂಪಡೆಯುವಂತೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಸರ್ವಾನಂದ ಸೋನೋವಾಲ, ಹಿಂಸಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಇದು ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇನ್ನೊಂದೆಡೆ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಅಸ್ಸಾಂ ಗೌರ್ನರ್ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಈ ಮಸೂದೆ ಅಸ್ಸಾಂ ಒಪ್ಪಂದಕ್ಕೆ ಮಾರಕವಾಗಿದೆ ಎಂದು ಪ್ರತಿಭಟನಾಕಾರರು ತಮ್ಮ ವಾದ ಮಂಡಿಸಿದ್ದಾರೆ. ಈ ಮಸೂದೆ ಅಸ್ಸಾಂ ಒಪ್ಪಂದದ 6ನೇ ಅನುಚ್ಛೇದದ ಉಲ್ಲಂಘನೆಯಾಗಿದ್ದು, 6ನೇ ಅನುಚ್ಛೇದದಲ್ಲಿ ರಾಜ್ಯದ ಸಂಸ್ಕøತಿ, ಭಾಷೆಯ ಅಸ್ತಿತ್ವದ ರಕ್ಷಣೆ ಮಾಡುವ ಭರವಸೆ ನೀಡಲಾಗಿದೆ ಎಂದಿದ್ದಾರೆ.

Facebook Comments

Sri Raghav

Admin