ನಾಳೆ ಬೆಳಗ್ಗೆ 10.30ಕ್ಕೆ ಸಂಪುಟ ವಿಸ್ತರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.19-ನಾಳೆ ಬೆಳಗ್ಗೆ 10.30 ರಿಂದ 11.30ರೊಳಗೆ ರಾಜಭವನದಲ್ಲಿ ನೂತನ ಸಚಿವರ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಕುರಿತಂತೆ ಈಗಾಗಲೇ ರಾಜ್ಯಪಾಲ ವಿ.ಆರ್.ವಾಲಾಗೆ ಮಾಹಿತಿ ನೀಡಿದ್ದೇವೆ. ನೂತನ ಸಚಿವರಿಗೆ ಅಧಿಕಾರ ಗೌಪ್ಯತೆ ಬೋಧಿಸಲು ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಹೇಳಿದರು.

10.30 ರಿಂದ 11.30ರೊಳಗೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಸಂಪುಟಕ್ಕೆ ಯಾರ್ಯಾರು? ಎಷ್ಟುಮಂದಿ ? ಸೇರ್ಪಡೆಯಾಗಲಿದ್ದಾರೆ ಎಂಬುದು ಸಂಜೆಯೊಳಗೆ ತಿಳಿಯಲಿದೆ ಎಂದರು. ವರ್ಗಾವಣೆ ದಂಧೆಗೆ ಯಡಿಯೂರಪ್ಪ ತಮ್ಮ ಮಗನನ್ನು ಬಿಟ್ಟಿದ್ದಾರೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಅವರು, ಅವರು ಏನೇನು ಮಾಡಿದ್ದಾರೆ ಎಂಬುದು ಜಗತ್ತಿಗೆ ಗೊತ್ತು.

ನನ್ನ ಬಾಯಿಂದ ಅದನ್ನು ಏಕೆ ಹೇಳಿಸುತ್ತೀರಿ ಎಂದು ಪ್ರಶ್ನಿಸಿದರು. ಕುಮಾರಸ್ವಾಮಿಯವರಿಗೆ ದೇವರು ಒಳ್ಳೆಯದನ್ನು ಮಾಡಲಿ. ನಾನು ಯಾರ ಬಗ್ಗೆಯೂ ಆರೋಪ ಮಾಡುವುದಿಲ್ಲ ಎಂದು ಅಸಮಾಧಾನದಿಂದಲೇ ಬಿಎಸ್‍ವೈ ಪ್ರತಿಕ್ರಿಯಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ