ತಿಂಗಳಾಂತ್ಯಕ್ಕೆ ಸಂಪುಟ ವಿಸ್ತರಣೆ, ಉಳಿದ 6 ಸ್ಥಾನಗಳ ಭರ್ತಿ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy-param

ಹುಬ್ಬಳ್ಳಿ,ಸೆ.5- ತಿಂಗಳಾಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಉಳಿದ ಆರು ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸುಳಿವು ನೀಡಿದ್ದಾರೆ. ನಗರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಉ-ಕಕ್ಕೆ ಯಾವುದೇ ಅನ್ಯಾಯ ಆಗಲು ಬಿಡುವುದಿಲ್ಲ. ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಒತ್ತು ಕೊಡಲಾಗುವುದು ಎಂದರು.

ಕಾಂಗ್ರೆಸ್‍ನಲ್ಲಿ ಯಾವುದೇ ಒಳ ಜಗಳ ಇಲ್ಲ. ರಮೇಶ್ ಜಾರಕಿಹೊಳಿ ಮಾತನಾಡುವ ಶೈಲಿಯೇ ಹಾಗೆ ಎಂದು ಸಮರ್ಥಿಸಿಕೊಂಡ ಅವರು ರಾಫೆಲ್ ಹಗರಣದಲ್ಲಿ ನೇರವಾಗಿ ಮೋದಿ ಭಾಗಿಯಾಗಿದ್ದಾರೆ. ಆ ಡೀಲ್‍ನಲ್ಲಿ ಕೋಟ್ಯಾಂತರ ರೂ ಹಗರಣ ನಡೆದಿದ್ದು ಈ ಕುರಿತು ರಾಜ್ಯದಾದ್ಯಂತ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ದಿನೇ ದಿನೇ ತೈಲ ಬೆಲೆ ಏರಿಕೆ ಆಗುತ್ತಿದ್ದು ರೂಪಯಿ ಮೌಲ್ಯ ಕುಸಿಯುತ್ತಿದೆ. ವಿತ್ತ ಸಚಿವ ಅರುಣ್ ಜೆಟ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ದೇಶದಲ್ಲಿ ಆರ್ಥಿಕ ಅರಾಜಕತೆ ಉಚಿಟಾಗಿದೆ ಎಂದ ಅವರು ಇದಕ್ಕೆ ನೇರ ಕಾರಣ ಪ್ರಧಾನಿ ಮೋದಿ. ಅವರು ಕೇವಲ ಶೂಟು ಬೂಟ್ ಹಾಕಿ ಭಾಷಣಕ್ಕೆ ಸೀಮಿತರಾಗಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin