ಕುಮಾರಸ್ವಾಮಿ ಸಿಎಂ ಆಗಿ ಮುಂದುವರೆಯಲು ಸಂಪುಟ ಸಮ್ಮತಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 24-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಆಡಳಿತದಲ್ಲಿ ವಿಶ್ವಾಸ ವ್ಯಕ್ತಪಡಿಸುವ ತೀರ್ಮಾನವನ್ನು ಇಂದು ನಡೆದ ಅನೌಪಚಾರಿಕ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು, ವಿರೋಧ ಪಕ್ಷದ ಷಡ್ಯಂತ್ರಕ್ಕೆ ಅವಕಾಶವಾಗದಂತೆ ಎಲ್ಲಾ ಸಚಿವರು ಕುಮಾರಸ್ವಾಮಿ ನಾಯಕತ್ವದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರಕ್ಕೆ ಯಾವ ಅಭದ್ರತೆಯೂ ಇಲ್ಲ. ವಿರೋಧ ಪಕ್ಷದವರು ನೀಡುವಂತಹ ಹೇಳಿಕೆಗೆ ಯಾರೂ ಸ್ಪಂದಿಸುವುದಿಲ್ಲ.

ಶಾಸಕರು ಕೂಡ ಮುಖ್ಯಮಂತ್ರಿಯೊಂದಿಗಿದ್ದು ವಿಶ್ವಾಸ ವ್ಯಕ್ತಪಡಿಸುವ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಕುಮಾರಸ್ವಾಮಿ ನಾಯಕತ್ವದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಮುಂದುವರೆಸಲು ಸಹಮತ ವ್ಯಕ್ತಪಡಿಸಿದ್ದು, ವಿರೋಧ ಪಕ್ಷದ ಷಡ್ಯಂತ್ರಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಮುಂದುವರೆದು ಜನರಿಗೆ ನಿರಾಸೆಯಾಗದಂತೆ ಆಡಳಿತ ನಡೆಸಲಾಗುತ್ತದೆ. ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ ಫಲ ನೀಡುವುದಿಲ್ಲ. ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಚರ್ಚೆ ಮಾಡಿದ್ದೇವೆ.

ಈ ಫಲಿತಾಂಶ ರಾಷ್ಟ್ರ ಮತ್ತು ಲೋಕಸಭೆಗೆ ಜನಾದೇಶಕ್ಕೆ ನೀಡಲಾಗಿದೆ. ರಾಜ್ಯಕ್ಕೆ ಅಥವಾ ರಾಜ್ಯಸರ್ಕಾರಕ್ಕೆ ನೀಡಿದ ಜನಾದೇಶವಲ್ಲ. ಕಳೆದ ಒಂದು ವರ್ಷದ ಹಿಂದೆಯೇ ಜನಾದೇಶವನ್ನು ನೀಡಲಾಗಿತ್ತು. ಅದರಂತೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಆಡಳಿತ ನಡೆಸಲಾಗುತ್ತಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು.

ರಾಜ್ಯ ಸರ್ಕಾರದ ವಿರುದ್ಧ ಜನಾದೇಶ ನೀಡಲಾಗಿದೆ ಎಂಬ ವಿಶ್ಲೇಷಣೆ ಬಿಜೆಪಿಯವರದ್ದು. ಆದರೆ ಅದು ಲೋಕಸಭೆಗೆ ನೀಡಿರುವ ಜನಾದೇಶವಾಗಿದೆ. ರಾಜ್ಯದಲ್ಲಿ ಒಳ್ಳೆಯ ಸರ್ಕಾರ ನಡೆಸಲು ಹಾಕಿಕೊಂಡಿರುವ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಮುಂದುವರೆಸಲಾಗುವುದು ಎಂದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin