ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಕಾರು, ಪ್ರಯಾಣಿಕರು ಪಾರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು , ಡಿ.13- ಚಲಿಸುತ್ತಿದ್ದ ಕಾರಿನಲ್ಲಿನ ತಾಂತ್ರಿಕ ದೋಷದಿಂದ ಬೆಂಕಿ ಹೊತ್ತು ಕೊಂಡು ಸಂಪೂರ್ಣವಾಗಿ ಸುಟ್ಟು ಹೋಗಿದ್ದು ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ನೆಲಮಂಗಲದ ಅರಿಶಿನ ಗುಂಟೆ ಬಳಿ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ 4ರ ಸರ್ವಿಸ್ ರಸ್ತೆಯಲ್ಲಿ ಚಲಿಸುತ್ತಿದ್ದ ರೆನಾಲ್ಟ್ ಡಸ್ಟರ್ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ ತಕ್ಷಣ ಅದರಲ್ಲಿದ್ದವರು ಸಮಯಪ್ರಜ್ಞೆಯಿಂದ ಕಾರಿನಿಂದ ಕೆಳಗಿಳಿದಿದ್ದರಿಂದ ನಾಲ್ವರ ಜೀವ ಉಳಿದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನೆಲಮಂಗಲ ಅಗ್ನಿಶಾಮಕ ದಳದವರು ಆಗಮಿಸಿದರಾದರೂ ಅಷ್ಟರೊಳಗೆ ಕಾರು ಸಂಪೂರ್ಣವಾಗಿ ಭಸ್ಮವಾಗಿತ್ತು.

Facebook Comments