ದ್ವಿಚಕ್ರ ವಾಹನ-ಕಾರು ಡಿಕ್ಕಿ: ವ್ಯಕ್ತಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಬಂಗಾರಪೇಟೆ, ಜು.11-ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ತಿಪ್ಪನಹಳ್ಳಿ ಗೇಟ್ ಬಳಿ ನಡೆದಿದೆ. ತಿಪ್ಪನಹಳ್ಳಿ ನಿವಾಸಿ ರಮೇಶ್ (35) ಮೃತಪಟ್ಟ ವ್ಯಕ್ತಿ.

ಇಂದು ಬೆಳಗ್ಗೆ 6 ಗಂಟೆ ಸುಮಾರಿನಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ರಮೇಶ್‍ಗೆ ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾರಿನ ಚಾಲಕ ಹಾಗೂ ಕಾರನ್ನು ಬಂಗಾರಪೇಟೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ