ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಕಾರು, ಚಾಲಕ ಪಾರು
ಈ ಸುದ್ದಿಯನ್ನು ಶೇರ್ ಮಾಡಿ
ಕೋಲಾರ, ನ.26- ಅತಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಎರಡು ಕಂಬಗಳು ಧರೆಗುರುಳಿ ಬಿದ್ದಿದ್ದು , ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ತಾಲ್ಲೂಕಿನ ಜಂಗಂಬಸಾಪುರ ಗೇಟ್ ಬಳಿ ಇಂದು ಬೆಳಗ್ಗೆ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣಕ್ಕೆ ಬಾರದೆ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ನಂತರ ಶೆಡ್ವೊಂದಕ್ಕೆ ಡಿಕ್ಕಿ ಹೊಡೆದಿದೆ.
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯಿತಾದರೂ ಚಾಲಕನಿಗೆ ಯಾವುದೇ ಪ್ರಾಣ ಹಾನಿಯಾಗದೆ ಬಚಾವ್ ಆಗಿದ್ದಾರೆ. ಅಪಘಾತದ ದೃಶ್ಯ ನೋಡಿದರೆ ಭಾರೀ ಅನಾಹುತ ಸಂಭವಿಸಬೇಕಿತ್ತು. ಪವಾಡ ಸದೃಶ ರೀತಿಯಲ್ಲಿ ಚಾಲಕ ಪಾರಾಗಿದ್ದಾನೆ. ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Facebook Comments