ವಾಕಿಂಗ್ ಮಾಡುತ್ತಿದ್ದವರ ಮೇಲೆ ಹರಿದ ಕಾರು, ಓರ್ವ ಸ್ಥಳದಲ್ಲೇ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Car-accide--01

ಕಲಬುರಗಿ,ಡಿ.24- ರಸ್ತೆ ಬದಿಯಲ್ಲಿ ವಾಕಿಂಗ್ ಮಾಡುತ್ತಿದ್ದವರ ಮೇಲೆ ಕಾರು ಹರಿದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಬೀದರ್ ಜಿಲ್ಲೆ ಭಾಲ್ಕಿಯಿಂದ ಕೂಡಲ ಸಂಗಮಕ್ಕೆ ತೆರಳುತ್ತಿದ್ದ ಕಾರು ಚಾಲಕನಿಗೆ ಫಿಡ್ಸ್ ಬಂದು ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರು ರಸ್ತೆ ಬದಿ ವಾಕಿಂಗ್ ಮಾಡುತ್ತಿದ್ದವರ ಮೇಲೆ ಹರಿದಿದೆ ಎನ್ನಲಾಗಿದೆ.

ಕಾರು ಹರಿದ ಪರಿಣಾಮ ಕಾಲೇಜು ಪ್ರಾಧ್ಯಾಪಕರೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

# ಕಳ್ಳನ ಕೈ ಚಳಕ: ಇತ್ತ ಕಾರು ಹರಿದು ವ್ಯಕ್ತಿ ಸಾವನ್ನಪ್ಪಿದ್ದರೆ, ಕಳ್ಳನೋರ್ವ ಇವರು ತನ್ನ ಸಂಬಂಧಿ ಎಂದು ಹೇಳಿ ಹಣ, ಮೊಬೈಲ್ ದೋಚಿ ಪರಾರಿಯಾಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸಂಚಾರಿ ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin