ಕಾರು, ಲಾರಿ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಧಾರವಾಡ, ಏ.1- ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕೆಲಗೇರಿ ಬಡಾವಣೆ ಬೈಪಾಸ್ ಬಳಿ ನಡೆದಿದೆ.  ಮೃತಪಟ್ಟವರನ್ನು ಮಹಾರಾಷ್ಟ್ರ ಮೂಲದವರೆಂದು ತಿಳಿದು ಬಂದಿದ್ದು.

ಇಂದು ಬೆಳಿಗ್ಗೆ ಬೆಳಗಾವಿಯಿಂದ ಹುಬ್ಬಳ್ಳಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಎದುರಿಗೆ ವೇಗವಾಗಿ ಬಂದ ಲಾರಿ ಡಿಕ್ಕಿಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದ್ದು ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದರೆ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆ ದಾಖಲಿಸಲಾಗಿದೆ.
ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments