ಕಾರು , ಬೈಕ್ ಹಾಗೂ ಟ್ರಕ್ ನಡುವೆ ಸರಣಿ ಅಪಘಾತ : 7 ಮಂದಿ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

ಬಿಕಾನೇರ್ (ರಾಜಾಸ್ಥಾನ್), ನ. 12- ಕಾರು , ಬೈಕ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 7 ಮಂದಿ ದಾರುಣವಾಗಿ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 49ರಲ್ಲಿ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿಯ ಡೆಸ್‍ನೋಕ್ ಬಳಿ ಇಂದು ಬೆಳಗ್ಗೆ ಸಂಭವಿಸಿದ ಸರಣಿ ಅಪಘಾತದಲ್ಲಿ ಟ್ರಕ್, ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ರ್ದುಘಟನೆ ಸಂಭವಿಸಿದೆ. ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಜೀವ ಕಲೆದುಕೊಂಡಿದ್ದಾರೆ, ಗಂಭೀರವಾಗಿ ಗಾಯಗೊಂಡಿರು ವವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದ್ದು, ಅವರ ಬಗ್ಗೆ ಇನ್ನೂ ಸರಿಯಾದ ಮಾಹಿತಿ ದೊರೆತಿಲ್ಲ ಎಂದು ಜಿಲ್ಲಾಧಿಕಾರಿ ಕುಮಾರ್ ಪಾಲ್ ಗೌತಮ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರ ಪೈಕಿ ನಾಲ್ವರು ಮಹಿಳೆಯರು ಹಾಗೂ ಮೂರು ಪುರುಷರು ಸೇರಿದ್ದು ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಮೃತ ದೇಹಗಳನ್ನು ಮೋರ್‍ಗೂ ಆಸ್ಪತ್ರೆಯಲ್ಲಿಡಲಾಗಿದೆ ಎಂದು ಪೊಲೀಸ್ ವರಿಷ್ಠರು ತಿಳಿಸಿದ್ದಾರೆ.

Facebook Comments