ಕಾರುಗಳ ಮುಖಾಮುಖಿ ಡಿಕ್ಕಿ, ಮೂವರು ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಮಗಳೂರು, ಏ.19-ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜ್ಯೋತಿ(14), ಸುಬ್ಬಲಕ್ಷ್ಮಿ(60), ಮುನಿರಾಜು ಮೃತಪಟ್ಟ ದುರ್ದೈವಿಗಳು.

ಇವರು ಕಾರಿನಲ್ಲಿ ತೆರಳುತ್ತಿದ್ದಾಗ ಚಿಕ್ಕಮಗಳೂರು ತರೀಕೆರೆ ತಾಲೂಕಿನ ಶಿವಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 506ರ ಬಳಿ ಎರಡು ಕಾರುಗಳ ನಡುವೆ ಈ ಅಪಘಾತ ಸಂಭವಿಸಿದೆ.

ಅಪಘಾತಕ್ಕೀಡಾದ ಮುನಿರಾಜು ಮತ್ತು ಸುಬ್ಬಲಕ್ಷ್ಮಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.
ಈ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments