ಚಿದಂಬರಂ ನಿವಾಸಕ್ಕೆ ತೆರಳಿ ನೋಟಿಸ್ ಅಂಟಿಸಿದ ಸಿಬಿಐ.!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಆ.21- ಐಎನ್‍ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಚಿದಂಬರಂ ಅವರ ದೆಹಲಿ ನಿವಾಸದ ಮೇಲೆ ಮತ್ತೆ ಸಿಬಿಐ ಅಧಿಕಾರಿಗಳು ಇಂದು ಮುಂಜಾನೆ ತೆರಳಿ ಅವರ ಅನುಪಸ್ಥಿತಿಯಲ್ಲಿ ಮನೆಗೆ ನೋಟಿಸ್ ಅಂಟಿಸಿ ಹಿಂದಿರುಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ನಿನ್ನೆ ಸಿಬಿಐ ಅಧಿಕಾರಿಗಳು ದೆಹಲಿ ನಿವಾಸದ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಚಿದಂಬರಂ ನಾಪತ್ತೆಯಾಗಿದ್ದರು.

ಇದೀಗ ಇಂದು ನಸುಕಿನಲ್ಲಿ ಮತ್ತೆ ಅಧಿಕಾರಿಗಳು ಚಿದಂಬರಂ ಅವರ ದೆಹಲಿ ನಿವಾಸಕ್ಕೆ ಆಗಮಿಸಿ, ಶೋಧ ನಡೆಸಿದರು. ಚಿದಂಬರಂ ಮನೆಯಲ್ಲಿ ಇಲ್ಲದ ಕಾರಣ ಕೋರ್ಟ್ ನೋಟಿಸ್ ಸೇರಿದಂತೆ ಇತರ ವಿವರಗಳ ಪ್ರತಿಯನ್ನು ಸಿಬಿಐ ಅಧಿಕಾರಿ ಮನೆಗೆ ನೋಟಿಸ್ ಅಂಟಿಸಿದ್ದಾರೆ.

ನಿನ್ನೆ ದೆಹಲಿ ಹೈ ಕೋರ್ಟ್ ಪಿ.ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸುತ್ತಿದ್ದಂತೆಯೇ ಇಡಿ (ಜಾರಿ ನಿರ್ದೇಶನಾಲಯ) ಮತ್ತು ಸಿಬಿಐ ಅಧಿಕಾರಿಗಳು ಚಿದಂಬರಂ ಅವರ ಮನೆಗೆ ಬಂದಿದ್ದರು. ಆದರೆ ಚಿದಂಬರಂ ಅಲ್ಲಿ ಇರಲಿಲ್ಲ.

6.30ಕ್ಕೆ ಮನೆಗೆ ಬಂದ ಅಧಿಕಾರಿಗಳು 10 ನಿಮಿಷಗಳ ನಂತರ ಅಲ್ಲಿಂದ ವಾಪಸ್ ತೆರಳಿದ್ದಾರೆ. ಸಿಬಿಐ ಅಧಿಕಾರಿಗಳು ಬಂದು ಹೋದ ಬೆನ್ನಲ್ಲೇ 7.30ರ ಸುಮಾರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳೂ ಸಹ ಚಿದಂಬರಂ ಮನೆಗೆ ಬಂದಿದ್ದಾರೆ.

ಐಎನ್‍ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಚಿದಂಬರಂ ಅವರ ವಿರುದ್ಧ ಸಿಬಿಐ ಎಫ್‍ಐಆರ್ ದಾಖಲಿಸಿಕೊಂಡಿದೆ.

ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸುತ್ತಿದ್ದಂತೆಯೇ ಚಿದಂಬರಂ ಬಂಧನದಿಂದ ರಕ್ಷಣೆ ಪಡೆಯುವುದಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin