ಫೇಸ್‍ಬುಕ್‍ನಲ್ಲಿ ಅಶ್ಲೀಲ ವಿಡಿಯೋ ಅಪ್‍ಲೋಡ್ ಮಾಡುತ್ತಿದ್ದ ರೌಡಿ ಕೋಳಿ ಮಂಜ ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.24- ಮಕ್ಕಳ ಅಶ್ಲೀಲ ವಿಡಿಯೋ ಚಿತ್ರಗಳನ್ನು ಫೇಸ್‍ಬುಕ್‍ನಲ್ಲಿ ಅಪ್‍ಲೋಡ್ ಮಾಡುತ್ತಿದ್ದ ರೌಡಿ ಮಂಜುನಾಥ್ ಅಲಿಯಸ್ ಕೋಳಿ ಮಂಜನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚಾಮರಾಜಪೇಟೆ, ವಿಠಲನಗರದಲ್ಲಿ ನೆಲೆಸಿದ್ದ ಕೋಳಿಮಂಜ (28)ನ ವಿರುದ್ಧ 2014ರಲ್ಲಿ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ರೌಡಿ ಪಟ್ಟಿ ತೆರೆದಿದ್ದು, ಈತನ ವಿರುದ್ಧ ಕಳ್ಳತನ, ದರೋಡೆ ಸೇರಿದಂತೆ ಒಟ್ಟು 8 ಪ್ರಕರಣಗಳು ದಾಖಲಾಗಿವೆ.

ಲೈಂಗಿಕ ಅಪರಾಧಗಳನ್ನು ಎಸಗುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸೈಬರ್ ಟಿಪ್‍ಲೈನ್ ಮುಖಾಂತರ ಬಂದ ದೂರಿನನ್ವಯ ಬಸವೇಶ್ವರ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಪ್ರಕರಣದ ಆರೋಪಿ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಕೋಳಿಮಂಜನನ್ನು ಬಂಧಿಸಿದ್ದಾರೆ. ಆರೋಪಿಯು ಮಕ್ಕಳ ಅಶ್ಲೀಲ ವಿಡಿಯೋ ಚಿತ್ರಗಳನ್ನು ಫೇಸ್‍ಬುಕ್‍ನಲ್ಲಿ ಅಪ್‍ಲೋಡ್ ಮಾಡಿದ್ದ ಬಗ್ಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಈ ಕಾರ್ಯಾಚರಣೆಯನ್ನು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪ ಪೊಲೀಸ್ ಆಯುಕ್ತ ಕುಲ್‍ದೀಪ್‍ಕುಮಾರ್ ಜೈನ್ ಮಾರ್ಗದರ್ಶನದಲ್ಲಿ ಸಿಸಿಬಿ ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್ ಆಯುಕ್ತ ವಿರೂಪಾಕ್ಷಪ್ಪ ನೇತೃತ್ವದಲ್ಲಿ ಇನ್‍ಸ್ಪೆಕ್ಟರ್ ಜಗದೀಶ್ ಹಾಗೂ ಸಿಬ್ಬಂದಿ ಕೈಗೊಂಡಿದ್ದರು.

Facebook Comments

Sri Raghav

Admin