BREAKING : ಡ್ರಗ್ ಕೇಸ್ : ನಿರೂಪಕ ಅಕುಲ್‍ಬಾಲಾಜಿ ಸೇರಿ ಮೂವರಿಗೆ ಸಿಸಿಬಿ ನೋಟೀಸ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.18- ಡ್ರಗ್ ಜಾಲದ ಬೆನ್ನತ್ತಿರುವ ಸಿಸಿಬಿ ಪೊಲೀಸರು ನಟ ಮತ್ತು ನಿರೂಪಕ ಅಕುಲ್‍ಬಾಲಾಜಿ, ಆರ್.ವಿ.ಯುವರಾಜ್ ಸೇರಿ ಮೂರು ಮಂದಿಯನ್ನು ವಿಚಾರಣೆ ನಡೆಸಲು ನೋಟಿಸ್ ಜಾರಿ ಮಾಡಿದೆ.

ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತನಿಖೆ ಮುಂದುವರೆಸಿರುವ ಸಿಸಿಬಿ ಪೊಲೀಸರು ಮತ್ತಷ್ಟು ಮಾಹಿತಿ ಕಲೆ ಹಾಕುವ ಸಂಬಂಧ ಚಿತ್ರರಂಗಕ್ಕೆ ಸೇರಿದ ಅಕುಲ್ ಬಾಲಾಜಿ, ಸಂತೋಷ್ ಕುಮಾರ್, ಆರ್.ವಿ.ಯುವರಾಜ್ ಅವರಿಗೆ ನೋಟಿಸ್ ನೀಡಿರುವುದಾಗಿ ತಿಳಿಸಿದ್ದಾರೆ.

ನಾಳೆ ಬೆಳಗ್ಗೆ 10 ಗಂಟೆಗೆ ಸಿಸಿಬಿ ಕಚೇರಿಯಲ್ಲಿ ನಡೆಯುವ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‍ನಲ್ಲಿ ತಿಳಿಸಲಾಗಿದೆ ಎಂದು ಜಂಟಿ ಪೆÇಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಡ್ರಗ್ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಈವರೆಗೂ 12 ಮಂದಿಯನ್ನು ಬಂಸಲಾಗಿದೆ. ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ರವಿಶಂಕರ್, ಲೂಮ್ ಪೆಪ್ಪರ್, ರಾಹುಲ್ ಸೇರಿದಂತೆ ಹಲವಾರು ಮಂದಿ ಬಂಧನಕ್ಕೆ ಒಳಗಾಗಿ, ವಿಚಾರಣೆ ನಂತರ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

ಸ್ಯಾಂಡಲ್‍ವುಡ್‍ನ ತಾರಾ ದಂಪತಿ ದಿಗಂತ್ ಮತ್ತು ಐಂದ್ರಿತಾ ರೇ ಅವರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ. ಈ ದಂಪತಿಯನ್ನು ಮತ್ತೊಂದು ಸುತ್ತಿನ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಈಗ ಅಕುಲ್ ಬಾಲಾಜಿ ಸೇರಿ ಮೂವರಿಗೆ ನೋಟಿಸ್ ನೀಡಿದ್ದು, ಮತ್ತಷ್ಟು ಮಾಹಿತಿ ಕಲೆ ಹಾಕಲು ಸಿಸಿಬಿ ಮುಂದಾಗಿದೆ.

Facebook Comments

Sri Raghav

Admin