ಅಂದರ್- ಬಾಹರ್ : 18 ಜನರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 29- ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶೆಟ್ಟಿಹಳ್ಳಿ ಪಾರ್ಕ್ ರಸ್ತೆಯ ಮನೆಯೊಂದರಲ್ಲಿ ಜೂಜಾಟ ಆಡುತ್ತಿದ್ದ 18 ಮಂದಿ ಜೂಜುಕೋರರನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ಬಂಧಿತರಿಂದ 2,74,800 ರೂ. ನಗದು, ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಲಾಕ್‍ಡೌನ್ ನಿಯಮವನ್ನು ಉಲ್ಲಂಘಿಸಿ ಸ್ನೇಹಿತರು ಹಾಗೂ ಸ್ಥಳೀಯರನ್ನು ಕರೆಸಿಕೊಂಡು ಮನೆಯನ್ನೇ ಜೂಜಾಟ ಕೇಂದ್ರವನ್ನಾಗಿ ಮಾಡಿಕೊಂಡಿದ್ದರು. ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳ ಕಾರ್ಯಾಚರಣೆಯನ್ನು ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Facebook Comments