ಆದಿತ್ಯ ಆಳ್ವ ಮನೆ ಮೇಲೆ ಸಿಸಿಬಿ ದಿಢೀರ್ ದಾಳಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.15- ಮಾಜಿ ಸಚಿವ ದಿವಂಗತ ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯ ಆಳ್ವ ಅವರ ಹೆಬ್ಬಾಳದ ಹೌಸ್ ಆಫ್ ಲೈಫ್ ಮನೆ ಮೇಲೆ ಸಿಸಿಬಿ ಪೊಲೀಸರು ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದರು.

ಕಾಟನ್‍ಪೇಟೆ ಪ್ರಕರಣದಲ್ಲಿ ಆರನೆ ಆರೋಪಿಯಾಗಿರುವ ಆದಿತ್ಯ ಆಳ್ವ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದ ಸಿಸಿಬಿ ಪೊಲೀಸರು ಬೆಳ್ಳಂಬೆಳಗ್ಗೆ ಹೌಸ್ ಆಫ್ ಲೈಫ್ ಮೇಲೆ ದಾಳಿ ನಡೆಸಿದರು.

ಡ್ರಗ್ಸ್ ಪ್ರಕರಣದಲ್ಲಿ ಆದಿತ್ಯ ಆಳ್ವ ಹೆಸರು ಕೇಳಿಬರುತ್ತಿದ್ದಂತೆ ಅವರು ನಾಪತ್ತೆಯಾಗಿದ್ದಾರೆ. ದೆಹಲಿ, ಬಾಂಬೆ ಮತ್ತಿತರ ಪ್ರದೇಶಗಳಲ್ಲೂ ಆದಿತ್ಯನಿಗೆ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಹೀಗಾಗಿ ಹೆಬ್ಬಾಳದಲ್ಲಿರುವ ಹೌಸ್ ಆಫ್ ಲೈಫ್‍ನಲ್ಲಿ ಆಳ್ವ ತಲೆಮರೆಸಿಕೊಂಡಿರಬಹುದು ಎಂಬ ಗುಮಾನಿ ಮೇರೆಗೆ ಎಂಟು ಮಂದಿ ಸಿಸಿಬಿ ಪೊಲೀಸರು ದಾಳಿ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಬಾಲಿವುಡ್ ನಟ ವಿವೇಕ್ ಒಬೆರಾಯವ್ ಅವರ ಭಾಮೈದರೂ ಆಗಿರುವ ಆಳ್ವ ಅವರು ವಿಶಾಲವಾಗಿರುವ ಹೌಸ್ ಆಫ್ ಲೈಫ್‍ನಲ್ಲಿ ತಲೆಮರೆಸಿಕೊಂಡಿರಬಹುದು ಎಂಬ ಗುಮಾನಿ ಮೇರೆಗೆ ಈ ದಾಳಿ ನಡೆದಿದೆ.

Facebook Comments

Sri Raghav

Admin