2008ರ ಬೆಂಗಳೂರು ಬಾಂಬ್ ಸ್ಫೋಟ ಆರೋಪಿಯನ್ನು ನಗರಕ್ಕೆ ಕರೆತಂದ ಸಿಸಿಬಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.22- ಬೆಂಗಳೂರು ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ಬಂಧಿಸಲಾಗಿರುವ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ನಗರಕ್ಕೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಕೇರಳದ ನಿವಾಸಿ ಶೋಯೆಬ್ (31)ಬಂಧಿತ ಆರೋಪಿ. ಹನ್ನೆರಡು ವರ್ಷದ (2008) ಹಿಂದೆ ಬೆಂಗಳೂರು ನಗರದಲ್ಲಿ ಏಳು ಕಡೆ ಸರಣಿ ಬಾಂಬ್ ಸ್ಫೋಟ ಉಂಟಾಗಿತ್ತು.

ಆ ಸಂದರ್ಭದಲ್ಲಿ ಒಬ್ಬರು ಮೃತಪಟ್ಟಿದ್ದರು. ಹಲವು ಮಂದಿ ಗಾಯಗೊಂಡಿದ್ದರು. ಈ ಪ್ರಕರಣದ ಆರೋಪಿಗಳ ಬಂಧನಕ್ಕೆ ಸಿಸಿಬಿ ಪೊಲೀಸರು ಶೋಧ ನಡೆಸುತ್ತಿದ್ದರು. ಆರೋಪಿ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಕೇಂದ್ರದ ಏಜೆನ್ಸಿಗಳ ಜೊತೆ ಮಾತುಕತೆ ನಡೆಸಿ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನಕ್ಕೆ ರೆಡ್‍ಕಾರ್ನರ್ ನೋಟಿಸ್ ಸಹ ಜಾರಿಗೊಸಲಾಗಿತ್ತು.

ಕೇರಳದ ತ್ರಿವೆಂಡ್ರಮ್‍ನ ವಿಮಾನ ನಿಲ್ದಾಣಕ್ಕೆ ಆರೋಪಿ ಬರುವ ಬಗ್ಗೆ ಮಾಹಿತಿ ಕಲೆ ಹಾಕಿದ ಸಿಸಿಬಿಯ ಎಟಿಸಿ ವಿಭಾಗದ ಇಬ್ಬರು ಇನ್ಸ್‍ಪೆಕ್ಟರ್ ಅವರನ್ನೊಳಗೊಂಡ ತಂಡ ಅಲ್ಲಿಗೆ ತೆರಳಿ ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿಯನ್ನು ಸಿಸಿಬಿ ಪೊಲೀಸರು ನಗರಕ್ಕೆ ಕರೆತಂದು ಹೆಚ್ಚಿನ ವಿಚಾರಣೆಗಳೊಪಡಿಸಿ ಹಲವು ಮಾಹಿತಿಗಳನ್ನು ಪಡೆದುಕೊಳ್ಳಲಿದ್ದಾರೆ.

Facebook Comments