ಸುಪ್ರಿಂ ನಿದೇರ್ಶನದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 34ಟಿಎಂಸಿ ನೀರು ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

KRS-01

ನವದೆಹಲಿ. ಜು.02 : ಸುಪ್ರಿಂಕೋರ್ಟ್ ನಿದೇರ್ಶನದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 34ಟಿಎಂಸಿ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಆದರೆ, ತಮಿಳುನಾಡಿನ ಈ ಪ್ರಸ್ತಾವಕ್ಕೆ ಕರ್ನಾಟಕ ತೀವ್ರ ವಿರೋಧ ವ್ಯಕ್ತಪಡಿಸಿದೆ.  ಸೋಮವಾರ ನವದೆಹಲಿಯ ಶ್ರಮಶಕ್ತಿ ಭವನದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮೊದಲ ಸಭೆ ನಡೆಯಿತು. ಕೇಂದ್ರ ಜಲಮಂಡಳಿ ಮತ್ತು ಪ್ರಾಧಿಕಾರದ ಮುಖ್ಯಸ್ಥ ಎಸ್ ಮಸೂದ್ ಹುಸೇನ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಈ ಆದೇಶ ಹೊರಬಿದ್ದಿದೆ.

ಬೆಳಿಗ್ಗೆ 11 ರಿಂದ ನಡೆದ ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಎಂ.ಮಸೂದ್ ಹುಸೇನ್,ಕರ್ನಾಟಕದಿಂದ ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಕಾವೇರಿ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಸನ್ನ, ತಮಿಳುನಾಡಿನ ನೀರಾವರಿ ಇಲಾಖೆಯ ಕಾರ್ಯದರ್ಶಿ ಎಸ್.ಕೆ.ಪ್ರಭಾಕರ್, ಕೇರಳದಿಂದ ಟಿಂಬು ಬಿಸ್ವಾಲ್ ಹಾಗೂ ಪಾಂಡಿಚೇರಿಯಿಂದ ಎ.ಅನ್ಬರಸು ಮತ್ತು ಕೇಂದ್ರದಿಂದ ಐದು ಮಂದಿ ಪ್ರತಿನಿಧಿಗಳು ಭಾಗವಹಿಸಿದ್ದರು.

ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಸಹಮತ ಮೂಡದ ಹಿನ್ನೆಲೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಅಪೂರ್ಣಗೊಂಡಿದೆ. ನೀರು ಬಿಡುವ ವಿಚಾರದಲ್ಲಿ ತೀರ್ಮಾನ ತೆಗೆದುಕೊಳ್ಳಲು ಸಭೆ ವಿಫಲವಾಗಿದೆ. ಪ್ರಾಧಿಕಾರದ ಚೊಚ್ಚಲ ಸಭೆಯಲ್ಲಿ ನೀರಿನ ಹಂಚಿಕೆ ಬಗ್ಗೆ ತೀವ್ರ ಚರ್ಚೆಯಾಗಿದೆ.
ಜುಲೈ ತಿಂಗಳಲ್ಲಿ 34 ಟಿಎಂಸಿ ನೀರು ಬಿಡುವಂತೆ ಸಭೆಯಲ್ಲಿ ತಮಿಳುನಾಡು ಮನವಿ ಮಾಡಿದೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕ ತಮಿಳುನಾಡಿಗೆ 34 ಟಿಎಂಸಿ ನೀರು ಬಿಡಬೇಕು. ಆದರೆ ಕರ್ನಾಟಕದ ಡ್ಯಾಂಗಳಲ್ಲಿ ನಿರೀಕ್ಷಿತ ನೀರಿನ ಶೇಖರಣೆ ಇಲ್ಲ ಎಂದು ಕರ್ನಾಟಕ ತಮಿಳುನಾಡು ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿ, ಜುಲೈ ತಿಂಗಳಲ್ಲಿ 34 ಟಿಎಂಸಿ ನೀರು ಕೊಡಲು ಸಾಧ್ಯವಿಲ್ಲ ಎಂದಿದೆ.

ಈ ಬಗ್ಗೆ ಕೇಂದ್ರ ಜಲಮಂಡಳಿ ಪ್ರಾಧಿಕಾರದ ಮುಖ್ಯಸ್ಥ ಎಸ್. ಮಸೂದ್ ಹುಸೇನ್ ಪ್ರತಿಕ್ರಿಯೆ ನೀಡಿದ್ದಾರೆ. ಕಾವೇರಿ ವಿವಾದದ ಬಗ್ಗೆ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಿದ್ದೇವೆ. ಕಾವೇರಿ ಕೊಳ್ಳದ ನೀರಿನ ಪ್ರಮಾಣದ ಬಗ್ಗೆ ಚರ್ಚಿಸಿದ್ದೇವೆ. ಕಾವೇರಿ ಒಳ ಮತ್ತು ಹೊರ ಹರಿವಿನ ಬಗ್ಗೆ ಮಾಹಿತಿ ಪಡೆದಿದ್ದೇವೆ. ಜೂನ್? ತಿಂಗಳಲ್ಲಿ ಕಾವೇರಿ ನೀರಿನ ಪ್ರಮಾಣ ಎಷ್ಟಿತ್ತು. ಜುಲೈ ತಿಂಗಳಲ್ಲಿ ನೀರು ಹಂಚಿಕೆ ಎಷ್ಟು ಆಗಬೇಕು. ಈವರೆಗೆ ಎಷ್ಟು ನೀರು ಹಂಚಿಕೆ ಮಾಡಲಾಗಿದೆ ಎಂದು ಚರ್ಚಿಸಲಾಗಿದೆ. ಜುಲೈ ತಿಂಗಳಲ್ಲಿ 34 ಟಿಎಂಸಿ ನೀರು ಬಿಡುವಂತೆ ತಮಿಳುನಾಡು ಮನವಿ ಮಾಡಿದೆ. ನೀರಿನ ಲಭ್ಯತೆ ನೋಡಿಕೊಂಡು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.  ಕೇಂದ್ರ ಸರ್ಕಾರ ಜೂನ್ 1ರಂದು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿತ್ತು. ಗೆಜೆಟ್ ನೋಟಿಫಿಕೇಷನ್ ಹೊರಡಿಸಿತ್ತು. ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ರಾಜ್ಯಗಳಿಗೆ ಪ್ರತಿನಿಧಿಗಳನ್ನು ನೇಮಿಸುವಂತೆ ಸೂಚನೆ ನೀಡಿತ್ತು.

Facebook Comments

Sri Raghav

Admin