ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ವಿಚಾರಣೆ ಸೆ.27ಕ್ಕೆ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.17- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಸೆ.27ಕ್ಕೆ ಮುಂದೂಡಿದೆ. ಪ್ರಕರಣ ಸಂಬಂಧ ಅಂತಿಮ ವರದಿ ಸಲ್ಲಿಸಲು ಅನುಮತಿಸಬೇಕೆ, ಬೇಡವೆ ಎಂಬ ಬಗ್ಗೆ ಅಂದು ವಿಚಾರಣೆ ನಡೆಸಲು ಹೈಕೋರ್ಟ್ ನಿರ್ಧರಿಸಿದೆ. ಈ ಕುರಿತು ಇಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಅವರ ವಿಭಾಗೀಯ ಪೀಠದಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲಿ ಸರ್ಕಾರಿ ವಕೀಲರಾದ ಪ್ರಭುಲಿಂಗ ನಾವಡಗಿ ಅವರು ಪ್ರಕರಣ ಸಂಬಂಧ ಅಂತಿಮ ವರದಿ ಸಲ್ಲಿಸಲು ಅನುಮತಿಸಬೇಕೆಂದು ಮನವಿ ಮಾಡಿದರು.

ಈಗಾಗಲೇ ವಿಚಾರಣೆ ಪೂರ್ಣಗೊಂಡಿದ್ದು, ಅಂತಿಮ ವರದಿ ಸಲ್ಲಿಸಲು ಅನುಮತಿಸಬೇಕೆಂದು ಮನವಿ ಮಾಡಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಯುವತಿ ಪರ ವಕೀಲರಾದ ಇಂದಿರಾ ಜೈಸಿಂಗ್ ಅವರು ಎಸ್‍ಐಟಿ ತನಿಖಾ ವರದಿ ಈಗಾಗಲೇ ಸೋರಿಕೆಯಾಗಿದೆ. ಈ ವರದಿ ರಮೇಶ್ ಜಾರಕಿಹೊಳಿ ಅವರಿಗೆ ಕ್ಲೀನ್‍ಚಿಟ್ ನೀಡಿದಂತಿದೆ.

ತನಿಖಾ ವರದಿ ಸೋರಿಕೆ ಬಗ್ಗೆ ತನಿಖೆಯಾಗಬೇಕು, ಎಸ್‍ಐಟಿ ತನಿಖಾ ವರದಿಯನ್ನು ರದ್ದುಪಡಿಸಲು ನಾವು ಮನವಿ ಮಾಡಿದ್ದೇವೆ ಎಂದು ಪ್ರಬಲ ವಾದ ಮಂಡಿಸಿದರು. ವಾದ-ವಿವಾದಗಳನ್ನು ಆಲಿಸಿದ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಸೆ.27ಕ್ಕೆ ಮುಂದೂಡಿದೆ.

Facebook Comments