ಸಿ.ಡಿ ಪ್ರಕರಣದ ಯುವತಿಯ ತಾಯಿಗೆ ಅನಾರೋಗ್ಯ

ಈ ಸುದ್ದಿಯನ್ನು ಶೇರ್ ಮಾಡಿ

ವಿಜಯಪುರ,ಏ.5- ಸಿ.ಡಿ ಪ್ರಕರಣದ ಯುವತಿಯ ತಾಯಿಗೆ ಅನಾರೋಗ್ಯ ಕಾಡುತ್ತಿದ್ದು, ಇಂದು ಬೆಳಗ್ಗೆ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಯುವತಿಯ ಅಜ್ಜಿಗೆ ಅನಾರೋಗ್ಯ ಇದ್ದ ಕಾರಣಕ್ಕಾಗಿ ಅವರನ್ನು ನೋಡಿಕೊಳ್ಳಲು ಯುವತಿಯ ತಾಯಿ ಮತ್ತು ಅವರ ಕುಟುಂಬ ಸದಸ್ಯರು ಬೆಳಗಾವಿಯಿಂದ ವಿಜಯಪುರಕ್ಕೆ ಆಗಮಿಸಿದ್ದರು.

ಯುವತಿಯ ತಾಯಿಗೆ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಎರಡುಮೂರು ದಿನಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಹೇಳಲಾಗಿದೆ. ಇಂದು ಬೆಳಗ್ಗೆ ಆಕೆಯನ್ನು ವಿಜಯಪುರಕ್ಕೆ ಪೊಲೀಸ್ ಭದ್ರತೆಯಲ್ಲಿ ಕರೆದುಕೊಂಡು ಹೋಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

Facebook Comments