ಸಿಡಿ ಯುವತಿ ಉಲ್ಟಾ ಹೇಳಿಕೆ ನೀಡಿಲ್ಲ: ವಕೀಲ ಸೂರ್ಯ ಮುಕುಂದ ರಾಜ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.12- ಸಿ.ಡಿ ಪ್ರಕರಣದ ಯುವತಿ ಯಾವುದೇ ಉಲ್ಟಾ ಹೇಳಿಕೆ ಹೊಡೆದಿಲ್ಲ. ಆ ಯುವತಿ ತಮ್ಮ ನಿಲುವಿಗೆ ಬದ್ಧರಾಗಿದ್ದಾರೆ ಎಂದು ಯುವತಿ ಪರ ವಕೀಲ ಸೂರ್ಯ ಮುಕುಂದ ರಾಜ್ ಸ್ಪಷ್ಟಪಡಿಸಿದ್ದಾರೆ. ಆರೋಪಿ ಜೊತೆಗಿನ ಮಾತುಕತೆ ಸಂಬಂಧ ದಾಖಲೆಯ ಪತ್ರವನ್ನು ಎಸ್‍ಐಟಿ ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಯಾವುದೇ ರೀತಿಯ ಉಲ್ಟಾ ಹೇಳಿಕೆಗಳನ್ನು ನೀಡಿಲ್ಲ. ಇದೊಂದು ರೀತಿ ಏಪ್ರಿಲ್ ಫೂಲ್ ಆದಂಗೆ ಆಯ್ತು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಎಸ್‍ಐಟಿ ಅಧಿಕಾರಿಗಳ ಎದುರು ಇಂದು ಯುವತಿ ದಿಢೀರ್ ಹಾಜರಾಗಿ ಹೇಳಿಕೆ ನೀಡಿದ್ದಾಳೆ. ಮತ್ತೆ ನ್ಯಾಯಾಧೀಶರ ಎದುರು ಹಾಜರಾಗಿ ಹೇಳಿಕೆ ನೀಡಲಿದ್ದಾಳೆ ಎಂಬ ವಿಷಯ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಈ ಸಂಬಂಧ ಪ್ರತಿಕ್ರಿಯಿಸಿದ ಸೂರ್ಯ ಮುಕುಂದರಾಜ್, ಆ ಯುವತಿ ಯಾವುದೇ ಹೇಳಿಕೆಗಳನ್ನು ಕೊಟ್ಟೇ ಇಲ್ಲ. ಯುವತಿ ಸ್ವತಂತ್ರವಾಗಿ ಹೇಳಿಕೆ ಕೊಡುತ್ತಿದ್ದಾಳೆ. ಈ ಪ್ರಕರಣವನ್ನು ಹೈಕೋರ್ಟ್ ನಿರ್ವಹಣೆ ಮಾಡುತ್ತಿದೆ ಎಂದರು.

Facebook Comments