ಸಿಡಿ ಕುರಿತು ಮತ್ತಷ್ಟು ಮಾಹಿತಿ ಕಲೆ ಹಾಕಿದ ಪೊಲೀಸರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.2- ಸಿಡಿ ಪ್ರಕರಣದ ಯುವತಿಯ ವಿಚಾರಣೆ ಯನ್ನು ಮುಂದುವರೆಸಿರುವ ವಿಶೇಷ ತನಿಖಾ ದಳದ ಪೊಲೀಸರು ಇಂದು ಮಹತ್ವದ ಮಾಹಿತಿಯನ್ನು ಕಲೆ ಹಾಕಿದ್ದಾರೆ.ಆಡುಗೋಡಿಯಲ್ಲಿರುವ ತಾಂತ್ರಿಕ ಕೇಂದ್ರದಲ್ಲಿ ತನಿಖಾಧಿಕಾರಿ ಎಸಿಪಿ ಕವಿತಾ ಅವರು ಯುವತಿಯ ವಿಚಾರಣೆ ನಡೆಸಿದ್ದಾರೆ. ಕಳೆದ ಮೂರು ದಿನಗಳಿಂದ ಸಂಗ್ರಹಿಸಲಾದ ಮಾಹಿತಿ ಆಧರಿಸಿ ಮತ್ತಷ್ಟು ಸ್ಪಷ್ಟನೆ ಪಡೆದುಕೊಳ್ಳಲು ಪೊಲೀಸರು ಪ್ರಯತ್ನಿಸಿದ್ದಾರೆ.

ಪ್ರಕರಣ ಬೆಳಕಿಗೆ ಬಂದ ದಿನದಿಂದ ಅಜ್ಞಾತ ಸ್ಥಳದಲ್ಲಿದ್ದ ಯುವತಿ ನ್ಯಾಯಾಲಯ ಅನುಮತಿ ಕೊಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರಾಗಿ ಸಿಆರ್‍ಪಿಸಿ 164 ಅಡಿ ಹೇಳಿಕೆ ದಾಖಲಿಸಿದ್ದರು. ಬಳಿಕ ಯುವತಿಯನ್ನು ಆಕೆ ವಾಸವಿದ್ದ ಪಿಜಿಗೆ, ಕೃತ್ಯ ನಡೆದಿದೆ ಎಂದು ಹೇಳಲಾದ ಮಲ್ಲೇಶ್ವರಂನ ಅಪಾರ್ಟ್‍ಮೆಂಟ್ ಸೇರಿದಂತೆ ಇನ್ನುಳಿದ ಸ್ಥಳಗಳಿಗೆ ಕರೆದೊಯ್ದ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ.

ಯುವತಿ ನೀಡಿದ ಹೇಳಿಕೆಗಳು ಮತ್ತು ಸ್ಥಳ ಮಹಜರ್‍ನಲ್ಲಿ ಕಂಡು ಬಂದ ಅಂಶಗಳನ್ನು ಖಚಿತ ಪಡಿಸಿಕೊಳ್ಳಲು ಇಂದು ಯುವತಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರತಿಯೊಂದು ಹೇಳಿಕೆಗಳನ್ನು ವಿಡಿಯೋ ಚಿತ್ರೀಕರಣದ ಮೂಲಕ ದಾಖಲಿಸಿಕೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ.

Facebook Comments