Saturday, April 20, 2024
Homeರಾಜ್ಯಕೇಂದ್ರ ತಂಡದಿಂದ ರಾಜ್ಯದಲ್ಲಿ ಬರ ಅಧ್ಯಯನ

ಕೇಂದ್ರ ತಂಡದಿಂದ ರಾಜ್ಯದಲ್ಲಿ ಬರ ಅಧ್ಯಯನ

ಬೆಂಗಳೂರು,ಅ.5- ರಾಜ್ಯದ ಬರಪೀಡಿತ ಪ್ರದೇಶಗಳ ವಾಸ್ತವ ಸ್ಥಿತಿಗತಿ ಅಧ್ಯಯನವನ್ನು ನಾಲ್ಕು ದಿನಗಳ ಕಾಲ ಕೇಂದ್ರ ಸರ್ಕಾರದ ಮೂರು ತಂಡಗಳು ನಡೆಸಲಿವೆ. 10 ಸದಸ್ಯರನ್ನೊಳಗೊಂಡ ಕೇಂದ್ರ ಸರ್ಕಾರದ ಮೂರು ತಂಡ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯಿಂದ ಬರಪೀಡಿತ ಜಿಲ್ಲೆಗಳಲ್ಲಿ ಪರಿಸ್ಥಿತಿಯ ಅಧ್ಯಯನ ಮಾಡಲಿವೆ.

ಇಂದು ಬೆಳಿಗ್ಗೆ ಕರ್ನಾಟಕ ರಾಜ್ಯಪ್ರಾಕೃತಿಕ ವಿಕೋಪ ಉಸ್ತುವಾರಿ ಕೇಂದ್ರಕ್ಕೆ ಭೇಟಿ ನೀಡಿ ಬರಪರಿಸ್ಥಿತಿ ಕುರಿತ ಮಾಹಿತಿಯನ್ನು ಅಧಿಕಾರಿಗಳಿಂದ ಕೇಂದ್ರದ ತಂಡಗಳು ಪಡೆದುಕೊಂಡಿವೆ. ಇಂದು ಮಧ್ಯಾಹ್ನ ಬರಪರಿಸ್ಥಿತಿಯ ಕುರಿತಂತೆ ಜಿಲ್ಲಾವಾರು ಮಾಹಿತಿಯನ್ನು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳಿಂದ ಪಡೆದುಕೊಂಡಿವೆ. ಮೂರು ತಂಡಗಳು ಇಂದೇ ವಿವಿಧ ಜಿಲ್ಲೆಗಳಿಗೆ ತೆರಳಲಿದ್ದು, ನಾಳೆಯಿಂದ ಬರಪೀಡಿತ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡು ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಿವೆ.

ರಾಜ್ಯದ 195 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿರುವ ರಾಜ್ಯಸರ್ಕಾರ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ರಾಜ್ಯಸರ್ಕಾರದ ಮನವಿ ಮೇರೆಗೆ ಅಧ್ಯಯನ ತಂಡಗಳನ್ನು ಕೇಂದ್ರಸರ್ಕಾರ ರಾಜ್ಯಕ್ಕೆ ಕಳುಹಿಸಿಕೊಟ್ಟಿದೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ಅವರ ನೇತೃತ್ವದ ಮೊದಲ ತಂಡವು ಇಂದು ಬೆಳಗಾವಿಗೆ ತೆರಳಲಿದೆ. ನಾಳೆ ಬೆಳಗಾವಿ, ವಿಜಯಪುರ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಅ.7 ರಂದು ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳ ಬರಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಲಿದೆ.

ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಮಧ್ಯಪ್ರದೇಶ ಸರ್ಕಾರ

ಕೇಂದ್ರ ಕುಡಿಯುವ ನೀರು ಹಾಗೂ ಸ್ವಚ್ಛತಾ ಸಚಿವಾಲಯದ ಹೆಚ್ಚುವರಿ ಸಲಹೆಗಾರ ಡಿ.ರಾಜಶೇಖರ್ ನೇತೃತ್ವದ ಎರಡನೇ ತಂಡವು ಇಂದು ಹುಬ್ಬಳ್ಳಿಗೆ ತೆರಳಲಿದೆ. ನಾಳೆ ಗದಗ, ಕೊಪ್ಪಳ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಅ.7 ರಂದು ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಬರಪರಿಸ್ಥಿತಿಯ ಅಧ್ಯಯನ ಕೈಗೊಳ್ಳಲಿದೆ.

ಕೇಂದ್ರ ಜಲ ಆಯೋಗದ ನಿರ್ದೇಶಕರಾದ ವಿ.ಅಶೋಕ್‍ಕುಮಾರ್ ನೇತೃತ್ವದ ಮೂರನೇ ತಂಡವು ನಾಳೆ ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಮಾಹಿತಿ ಸಂಗ್ರಹಿಸಲಿದೆ. ಅ.7 ರಂದು ಚಿತ್ರದುರ್ಗ, ದಾವಣಗೆರೆ ಹಾಗೂ ಅ.8 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಅಧ್ಯಯನ ಮಾಡಲಿದೆ.

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡ ನಿವಾಸದ ಮೇಲೆ ಇಡಿ ದಾಳಿ

ಈ ಮೂರು ತಂಡಗಳು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ಮಾಹಿತಿ ಸಂಗ್ರಹಿಸಿ ಅ.8 ರಂದು ಬೆಂಗಳೂರಿಗೆ ಮರಳಲಿವೆ. ಅ.9 ರಂದು ಬೆಂಗಳೂರಿನಲ್ಲಿ ಕೃಷಿ, ತೋಟಗಾರಿಕೆ ಸೇರಿದಂತೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಂದ ಮತ್ತೊಮ್ಮೆ ಸಂಕ್ಷಿಪ್ತ ವಿವರಣೆ ಪಡೆದು ದೆಹಲಿಗೆ ಮರಳುವ ಕಾರ್ಯಕ್ರಮವಿದೆ.

ಈ ನಡುವೆ ಕೃಷಿ ಸಚಿವ ಚಲುವರಾಯಸ್ವಾಮಿಯವರು ಬರಪೀಡಿತ ಪ್ರದೇಶಗಳ ಅಧ್ಯಯನಕ್ಕೆ ಆಗಮಿಸಿರುವ ಕೇಂದ್ರಸರ್ಕಾರದ ಅಧ್ಯಯನದ ತಂಡಗಳಿಗೆ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮುಂಗಾರು ಹಂಗಾಮಿನ ಮಳೆಯ ವಾಸ್ತವ ಪರಿಸ್ಥಿತಿ, ಬೆಳೆಹಾನಿ, ಇಳುವರಿ ಕುಸಿತವಾಗುವುದು ಸೇರಿದಂತೆ ಮಳೆ ಕೊರತೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಡುವಂತೆ ಸೂಚಿಸಿದ್ದಾರೆ.

RELATED ARTICLES

Latest News