ಏ. 22, 23ರಂದು ನಡೆಸಬೇಕಿದ್ದ ಸಿಇಟಿ ಪರೀಕ್ಷೆ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 22, 23ರಂದು ನಡೆಸಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಸೋಮವಾರ ತಿಳಿಸಿದರು.

ಕೋವಿಡ್-19 ಕಾರಣಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಗಳು ಇನ್ನೂ ಪೂರ್ಣ ವಾಗಿಲ್ಲ. ಅಲ್ಲದೆ ಸಹಜ ಸ್ಥಿತಿಯೂ ಇಲ್ಲ. ಹೀಗಾಗಿ ಸಿಇಟಿ ಮುಂದೂಡಲಾಗಿದೆ. ಏಪ್ರಿಲ್ ಮೂರನೇ ವಾರದಲ್ಲಿ ಸಿಇಟಿ ಪರೀಕ್ಷೆಯ ದಿನಾಂಕವನ್ನು ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ನಂತರ‌ ಅವರು ಈ ತೀರ್ಮಾನವನ್ನು ಪ್ರಕಟಿಸಿದರು.

Facebook Comments

Sri Raghav

Admin