ನಾಳೆ ಸಂಜೆ 4 ಗಂಟೆಗೆ ಸಿಇಟಿ ಫಲಿತಾಂಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.19- ವೃತ್ತಿ ಶಿಕ್ಷಣ ಕೋರ್ಸ್‍ಗಳ ಪ್ರವೇಶಕ್ಕಾಗಿ ನಡೆದಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ನಾಳೆ ಪ್ರಕಟವಾಗಲಿದೆ.
ನಾಳೆ ಸಂಜೆ 4 ಗಂಟೆ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.

ಫಲಿತಾಂಶವನ್ನು https://cetonline.karnataka.gov.in/kea/ ಪಡೆಯಬಹುದಾಗಿದೆ. ದಾಖಲೆಯ ಕಡಿವÉು ಅವಯಲ್ಲಿ ಸಿಇಟಿ ಫಲಿತಾಂಶ ಪ್ರಕಟವಾಗುತ್ತಿದೆ. ಇದಕ್ಕಾಗಿ ಪರೀಕ್ಷಾ ಪ್ರಾಕಾರದ ಅಕಾರಿ ಹಾಗೂ ಸಿಬ್ಬಂದಿ ಅವಿರತವಾಗಿ ಶ್ರಮಿಸಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಬೆಂಗಳೂರಿನ 86 ಕೇಂದ್ರಗಳು ಸೇರಿದಂತೆ ರಾಜ್ಯದ 530 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆದಿತ್ತು. ಸಿಇಟಿ ಪರೀಕ್ಷೆಗೆ 2,01,816 ಅಭ್ಯರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದರು.

ಆ.28 ರಿಂದ 30ರ ವರೆಗೆ ಮೂರು ದಿನಗಳ ಕಾಲ ಸಿಇಟಿ ಪರೀಕ್ಷೆ ನಡೆದಿತ್ತು. ಕೋವಿಡ್ ಪಾಸಿಟಿವ್ ಹೊಂದಿದ್ದ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಮೊದಲ ದಿನ ನಡೆದ ಜೀವಶಾಸ್ತ್ರಕ್ಕೆ ಶೇ.80.48ರಷ್ಟು ಅಂದರೆ 1,62,439 ಹಾಗೂ ಗಣಿತಕ್ಕೆ ಶೇ.93.90ರಷ್ಟು ಅಂದರೆ 1,89,522 ಅಭ್ಯರ್ಥಿಗಳು ಹಾಜರಾಗಿದ್ದರು.

ಆ.29ರಂದು ನಡೆದ ಸಿಇಟಿ ಪರೀಕ್ಷೆಗೆ 2,01,834 ಅಭ್ಯರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, 1,93,588 (ಶೇ.95.91) ಅಭ್ಯರ್ಥಿಗಳು ಭೌತಶಾಸ್ತ್ರ ವಿಷಯಕ್ಕೆ ಹಾಜರಾಗಿದ್ದರು.1,93,522 (ಶೇ.95.88) ಅಭ್ಯರ್ಥಿಗಳು ರಸಾಯನಶಾಸ್ತ್ರ ವಿಷಯಕ್ಕೆ ಹಾಜರಾಗಿದ್ದರು.

ಆ.30ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗಿತ್ತು. 1682 ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು ಎಂದು ಸಚಿವರು ತಿಳಿಸಿದ್ದಾರೆ.

Facebook Comments

Sri Raghav

Admin