ನಾಳೆ ಸಿಇಟಿ ಫಲಿತಾಂಶ ಪ್ರಕಟ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮೇ 24- ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂಜಿನಿಯರಿಂಗ್, ವೈದ್ಯಕೀಯ ಮತ್ತಿತರ ಕೋರ್ಸ್‍ಗಳ ಪ್ರವೇಶಕ್ಕಾಗಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಫಲಿತಾಂಶ ನಾಳೆ ಪ್ರಕಟವಾಗಲಿದೆ.

ಏಪ್ರಿಲ್ 29 ಮತ್ತು 30ರಂದು ನಡೆದಿದ್ದ 2019ರ ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ನಾಳೆ ಬೆಳಗ್ಗೆ 11 ಗಂಟೆಗೆ ಪ್ರಕಟಗೊಳ್ಳಲಿದೆ.
2019-20ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾತುರದಿಂದ ಕಾಯುತ್ತಿದ್ದಾರೆ.

ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಅವರು ನಾಳೆ ಬೆಳಗ್ಗೆ ಸಿಇಟಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ. ನಾಳೆ ಮಧ್ಯಾಹ್ನ 1 ಗಂಟೆಯ ನಂತರ ಪ್ರಾಧಿಕಾರದ ವೆಬ್‍ಸೈಟ್ http://kea.kar.nic.inhttp://cet.kar.nic.in, http://karresults.nic.in  ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಅದರಲ್ಲಿ ಶೇ.92ರಷ್ಟು ವಿದ್ಯಾರ್ಥಿಗಳು ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯಕ್ಕೆ ಪರೀಕ್ಷೆ ಬರೆದಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ