ಸಾರ್ವಜನಿಕರ ಎದುರೇ ಮಾಂಗಲ್ಯಸರ ಕಿತ್ತೊಯ್ದ ಸರಗಳ್ಳರು..!

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು,ಮೇ 22- ಮಟಮಟ ಮಧ್ಯಾಹ್ನ ಸಾರ್ವಜನಿಕರ ಎದುರೇ ಪಲ್ಸರ್ ಬೈಕ್‍ನಲ್ಲಿ ಬಂದ ಇಬ್ಬರು ಮಹಿಳೆ ಮಾಂಗಲ್ಯ ಸರ ದೋಚಿ ಪರಾರಿಯಾದ ಘಟನೆ ನಗರದಲ್ಲಿ ನಡೆದಿದೆ.

ಲಕ್ಷ್ಮಮ್ಮ(55) ಮಾಂಗಲ್ಯ ಸರ ಕಳೆದುಕೊಂಡ ಮಹಿಳೆ. ಇಂದು ಮಧ್ಯಾಹ್ನ ನಗರದ ಚಿಕ್ಕಪೇಟೆಯಲ್ಲಿರುವ ಬಯಲು ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಲಕ್ಷ್ಮಮ್ಮ ನಡೆದು ಹೋಗುತ್ತಿದ್ದರು.

ಈ ವೇಳೆ ಪಲ್ಸರ್ ಬೈಕ್‍ನಲ್ಲಿ ಬಂದ ಇಬ್ಬರು ಸಾರ್ವಜನಿಕರು ನೋಡುತ್ತಿದ್ದಾಗಲೇ ಆಕೆಯ 65 ಗ್ರಾಂ ತೂಕದ ಸುಮಾರು 1.40 ಲಕ್ಷ ರೂ. ಬೆಲೆಯ ಮಾಂಗಲ್ಯ ಸರವನ್ನು ಕಿತ್ತು ಪರಾರಿಯಾದರು.

ಈ ಸಂದರ್ಭದಲ್ಲಿ ಮಹಿಳೆ ಕೂಗಿಕೊಂಡಾಗ ಸಾರ್ವಜನಿಕರು ಅಡ್ಡಗಟ್ಟಿ ಸರಗಳ್ಳರನ್ನು ಹಿಡಿಯಲು ಯತ್ನಿಸಿದಾಗ ಅವರ ಮೇಲೆಯೇ ಬೈಕ್ ನುಗ್ಗಿಸಿ ಭಯದ ವಾತಾವರಣ ಸೃಷ್ಟಿಸಿ ಪರಾರಿಯಾಗಿದ್ದಾರೆ.

ವಿಷಯ ತಿಳಿದ ಕೂಡಲೇ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ, ಡಿವೈಎಸ್ಪಿ ತಿಪ್ಪೇಸ್ವಾಮಿ, ಇನ್‍ಸ್ಪೆಕ್ಟರ್‍ಗಳಾದ ಚಂದ್ರಶೇಖರ್, ರಾಧಾಕೃಷ್ಣ ಧಾವಿಸಿ ಪರಿಶೀಲಿಸಿದರು. ನಗರ ಠಾಣೆ ಸಬ್ ಇನ್‍ಸ್ಪೆಕ್ಟರ್ ಶುಭಾಂಬಿಕ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin