ಚಾಮುಂಡೇಶ್ವರಿ ಬೆಟ್ಟಕ್ಕೆ ರಾತ್ರಿ ವೇಳೆ ಪ್ರವೇಶ ನಿರ್ಬಂಧ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಆ.19- ಉಗ್ರರ ದಾಳಿ ಶಂಕೆ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಬೆಟ್ಟಕ್ಕೆ ರಾತ್ರಿ ವೇಳೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆಯಾಗಿರುವ ಕಾರಣ ಚಾಮುಂಡಿ ಬೆಟ್ಟದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ದಸರಾಗೆ ಕೇವಲ ಒಂದೂವರೆ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಮೈಸೂರು ನಗರ ಹಾಗೂ ಚಾಮುಂಡಿ ಬೆಟ್ಟದಲ್ಲಿ ಈಗಿನಿಂದಲೇ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ನಾಡಹಬ್ಬ ದಸರಾ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ನಗರ ಹಾಗೂ ಚಾಮುಂಡಿ ಬೆಟ್ಟದಲ್ಲಿ ಅಗತ್ಯ ಕ್ರಮ ಕೈಗೊಂಡಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಚಾಮಂಡಿ ಬೆಟ್ಟದಲ್ಲಿ ಪೊಲೀಸರು ನೈಟ್ ರೌಂಡ್ಸ್‍ನ್ನು ಆರಂಭಿಸಿದ್ದಾರೆ.ರಾತ್ರಿ 9ರ ನಂತರ ಚಾಮುಂಡಿ ಬೆಟ್ಟಕ್ಕೆ ತೆರಳುವ ಪ್ರತಿಯೊಬ್ಬರ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯರಿಗೆ ಮಾತ್ರ ಬೆಟ್ಟಕ್ಕೆ ಪ್ರವೇಶ ನೀಡಲಾಗುತ್ತಿತ್ತು. ಉಳಿದವರಿಗೆ ರಾತ್ರಿ ವೇಳೆ ನಿರ್ಬಂಧ ವಿಧಿಸಲಾಗಿದೆ.

ಅದೇ ರೀತಿ ನಗರದಾದ್ಯಂತ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಲಾಡ್ಜ್, ರೆಸ್ಟೋರೆಂಟ್‍ಗಳಿಗೆ ಆಗಮಿಸುವ ಪ್ರತಿಯೊಬ್ಬರ ಸಂಪೂರ್ಣ ಮಾಹಿತಿ ಪಡೆದು ಕೊಠಡಿಗಳನ್ನು ನೀಡಬೇಕೆಂದು ಪೊಲೀಸರು ಮಾಲೀಕರಿಗೆ ತಿಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ