ಚಾಮುಂಡೇಶ್ವರಿ ದೇವಿ ಉತ್ಸವ ಮೂರ್ತಿ ಮೆರವಣಿಗೆ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಜು.10- ಆಷಾಢ ಮಾಸದ ಮೂರನೆ ಶುಕ್ರವಾರವಾದ ಇಂದು ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.  ಮುಂಜಾನೆ 3.30ಕ್ಕೆ ಚಾಮುಂಡಿ ಬೆಟ್ಟದ ದೇವಿಕೆರೆಯಿಂದ ನೀರನ್ನು ತಂದು ಚಾಮುಂಡೇಶ್ವರಿಗೆ ಜಲಾಭಿಷೇಕ, ಪಂಚಾಮೃತಾಭಿಷೇಕ, ರುದ್ರಾಭಿಷೇಕ ನೆರವೇರಿಸಿ ನಂತರ ವಿವಿಧ ಹೂವುಗಳಿಂದ ಅಲಂಕಾರ ಮಾಡಿ ಮಹಾಮಂಗಳಾರತಿ ನೆರವೇರಿಸಲಾಯಿತು.

ಮೂರನೆ ಶುಕ್ರವಾರದ ನಿಮಿತ್ತ ಇಂದು ದೇವಿಯ ಉತ್ಸವ ಮೂರ್ತಿಯ ಮೆರವಣಿಗೆಯನ್ನು ದೇವಾಲಯದ ಆವರಣದಲ್ಲಿ ನೆರವೇರಿಸಲಾಯಿತು ಎಂದು ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ತಿಳಿಸಿದರು. ಇದೇ ವೇಳೆ ಬೆಟ್ಟಕ್ಕೆ ಆಗಮಿಸಿದ್ದ ಸಚಿವರಾದ ಈಶ್ವರಪ್ಪ ಹಾಗೂ ನಟ ದರ್ಶನ್ ಅವರು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.

Facebook Comments