ನಾಳೆ ಚಾಮುಂಡೇಶ್ವರಿ ಬ್ರಹ್ಮರಥೋತ್ಸವ, ಸಾರ್ವಜನಿಕರಿಗೆ ಪ್ರವೇಶ ನಿಷೇಧ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಅ.18- ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದ 2021ರ ಬ್ರಹ್ಮರಥೋತ್ಸವ ಪ್ರಯುಕ್ತ ನಾಳೆ ಬೆಳಿಗ್ಗೆ ನಡೆಯಲಿರುವ ರಥೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಸೇರುವ ನಿರೀಕ್ಷೆ ಇರುವುದರಿಂದ ಈ ಸಮಯದಲ್ಲಿ ಕೋವಿಡ್-19 ನಿಯಮಗಳನ್ನು ಪಾಲಿಸಲು ಕಷ್ಟವಾಗಲಿದೆ.

ಆದ್ದರಿಂದ ನಾಳೆ ಬೆಳಿಗ್ಗೆ 4 ಗಂಟೆಯಿಂದ 10 ಗಂಟೆಯವರೆಗೆ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರು, ಭಕ್ತಾದಿಗಳು ಹಾಗೂ ವಾಹನ ಪ್ರವೇಶವನ್ನು ನಿಷೇಸಿ ಜಿಲ್ಲಾಕಾರಿ ಡಾ. ಬಗಾದಿ ಗೌತಮ್ ಆದೇಶಿಸಿದ್ದಾರೆ.

ನಿಷೇತ ಅವಯಲ್ಲಿ ಶ್ರೀಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆದು ಬಂದಿರುವ ಸಂಪ್ರದಾಯದಂತೆ ನಡೆಯುವ ವಿವಿಧ ಪೂಜಾ ಕಾರ್ಯಕ್ರಮಗಳನ್ನು ದೇವಾಲಯದ ಅಕಾರಿಗಳು, ಅರ್ಚಕರು/ಸಿಬ್ಬಂದಿಗಳು ಮಾತ್ರ ನಡೆಸಲು ಅನುಮತಿ ನೀಡಲಾಗಿದೆ. ನಿಷೇತ ಅವಯಲ್ಲಿ ಮೆಟ್ಟಿಲು ಮಾರ್ಗದಿಂದ ಚಾಮುಂಡಿ ಬೆಟ್ಟಕ್ಕೆ ಭಕ್ತರು ಮತ್ತು ಸಾರ್ವಜನಿಕರು ಬರುವುದನ್ನು ನಿಷೇಸಲಾಗಿದೆ.

Facebook Comments