ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಅ.23- ಭಾರೀ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತವಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಾಮುಂಡಿಬೆಟ್ಟದಲ್ಲಿರುವ ದೊಡ್ಡನಂದಿ ರಸ್ತೆಯಲ್ಲಿ ಭೂ ಕುಸಿತವಾಗಿ ರಸ್ತೆಬದಿ ಅಳವಡಿಸಿದ್ದ ತಡೆಗೋಡೆ ಉರುಳಿಬಿದ್ದಿದೆ.

ಇಂದು ಬೆಳಗ್ಗೆ ಅಧಿಕಾರಿಗಳು ಬೆಟ್ಟಕ್ಕೆ ತೆರಳಿ ತಡೆಗೋಡೆ ರಿಪೇರಿ ಮಾಡಿಸಲು ಹಾಗೂ ಭೂ ಕುಸಿತ ಸರಿಪಡಿಸಲು ಕ್ರಮ ತೆಗೆದುಕೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಂದಿಗೆ ತೆರಳುವ ಮಾರ್ಗದಲ್ಲಿ ಸಾರ್ವಜನಿಕರು ಹಾಗೂ ವಾಹನಗಳನ್ನು ನಿಷೇಧಿಸಲಾಗಿದೆ. ಹಾಗಾಗಿ ಇಂದು ಪ್ರವಾಸಿಗರಿಗೆ ನಂದಿ ದರ್ಶನಕ್ಕೆ ಅವಕಾಶ ಸಿಗಲಿಲ್ಲ.

ಇದೇ ರಸ್ತೆಯಲ್ಲಿ ಮತ್ತೆ ಭೂಕುಸಿತವಾಗುವ ಸಾಧ್ಯತೆ ಇರುವುದರಿಂದ ತ್ವರಿತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ರಸ್ತೆಯಲ್ಲಿ ಬ್ಯಾರಿಕೇಡ್‍ಗಳನ್ನು ಹಾಕಿ ಯಾರೂ ಓಡಾಡದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Facebook Comments