ಜ.1ರಂದು ಚಾಮುಂಡಿ ಬೆಟ್ಟಕ್ಕೆ ನಿಷೇಧ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಡಿ. 25- ಮೈಸೂರಿನ ಚಾಮುಂಡಿಬೆಟ್ಟಕ್ಕೆ ಜ.1ರಂದು ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಜ.1ರಂದು ಶುಕ್ರವಾರ ಹೊಸ ವರ್ಷಾರಂಭದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಿ ದರ್ಶನಕ್ಕೆ ಆಗಮಿಸುವ ಕಾರಣ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ದೇವಾಲಯದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮವನ್ನು ಸರ್ಕಾರದ ಮಾರ್ಗಸೂಚಿಯಂತೆ ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಯವರ ಉಪಸ್ಥಿತಿಯಲ್ಲಿ ಸುರಕ್ಷಿತವಾಗಿ ಹಾಗೂ ಸರಳವಾಗಿ ನಡೆಸಲು ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Facebook Comments