ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

cheetaರಾಮನಗರ,ಫೆ.3-ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಚನ್ನಪಟ್ಟಣ ತಾಲ್ಲೂಕಿನ ವಿಠಲೇನಹಳ್ಳಿಯಲಿ ಕಳೆದ ಎರಡು ತಿಂಗಳಿನಿಂದ ಚಿರತೆಯು ಆಗಾಗ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಭಯಭೀತರಾಗಿದ್ದ ಗ್ರಾಮಸ್ಥರು, ಚಿರತೆ ಹಿಡಿಯುವಂತೆ ಹಲವು ಬಾರಿ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಚಿರತೆ ಹಿಡಿಯಲು ಅರಣ್ಯಾಧಿಕಾರಿಗಳು ಗ್ರಾಮದ ನಿಂಗಮ್ಮ ಎಂಬುವರ ತೋಟದಲ್ಲಿ ಬೋನ್ ಇರಿಸಿದ್ದರು. ತಡರಾತ್ರಿ ಚಿರತೆ ಬೋನಿಗೆ ಸಿಕ್ಕಿಬಿದ್ದಿದ್ದು, ಚಿರತೆಯನ್ನು ಸಂಗಂ ಅರಣ್ಯಕ್ಕೆ ಬಿಡಲು ತೀರ್ಮಾನಿಸಲಾಗಿದೆ.
ಕೊನೆಗೂ ಚಿರತೆ ಸಿಕ್ಕಿಬಿದ್ದಿದ್ದು ಆತಂಕದಲ್ಲಿದ್ದ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.

Facebook Comments